ಲಾರಿ ಢಿಕ್ಕಿ: ಬಾಲಕಿ ಗಂಭೀರ ಗಾಯ

Update: 2021-10-19 16:03 GMT

ಮಂಗಳೂರು, ಅ.19: ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಸಂಭವಿಸಿದೆ. ಫಾತಿಮಾ ರುಹಾ (10) ಗಾಯಗೊಂಡ ಬಾಲಕಿ. ಈಕೆ ಮಧ್ಯಾಹ್ನ 12 ಗಂಟೆಯ ವೇಳೆಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಬಿಎಸ್ ಬಳಿ ರಸ್ತೆ ಬದಿ ನಿಂತುಕೊಂಡಿದ್ದಾಗ ಬಜ್ಪೆ ಕೆಯಿಂದ ಬಂದ ಲಾರಿ ಢಿಕ್ಕಿ ಹೊಡೆಯಿತು. ಪರಿಣಾಮ ಲಾರಿಯ ಚಕ್ರಗಳು ಬಾಲಕಿಯ ಕಾಲಿನ ಮೇಲೆ ಹರಿದು ಹೋಗಿ ಆಕೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News