×
Ad

ಉಚ್ಚಿಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ; ವಾಹನಗಳ ಸಹಿತ ಇಬ್ಬರ ಬಂಧನ

Update: 2021-10-20 12:02 IST

ಮಂಗಳೂರು, ಅ.20: ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ಪೆರಿಂಬೈಲ್ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದ ಪೊಲೀಸ್ ತಂಡ ಎರಡು ಲಾರಿ, ಮೂರು ದ್ವಿಚಕ್ರ ವಾಹನ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕಲ್ಲಾಪು ನಿವಾಸಿ ಮಯ್ಯದ್ದಿ, ತಲಪಾಡಿ ನಿವಾಸಿ ರಾಯಲ್ ಡಿಸೋಜ ಎಂದು ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.

ಈ ಪ್ರದೇಶದಲ್ಲಿ ತಡರಾತ್ರಿ ವೇಳೆ ಅಕ್ರಮ ಮರಳು ಸಾಗಾಟ ವ್ಯಾಪಕಗೊಂಡ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ವತಃ ಡಿಸಿಪಿ ಹರಿರಾಮ್ ಶಂಕರ್ ಅವರೇ ಸ್ಥಳೀಯ ಪೊಲೀಸರ ನೆರವಿನಲ್ಲಿ ಅಕ್ರಮ ಮರಳು ಅಡ್ಡೆಗೆ ಮಂಗಳವಾರ ತಡರಾತ್ರಿ 12:30ರ ಸುಮಾರಿಗೆ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಎರಡು ಲಾರಿಗಳು, ಮೂರು ದ್ವಿಚಕ್ರ ವಾಹನಗಳು ಸೇರಿದಂತೆ ಅಪಾರ ಪ್ರಮಾಣದ ಅಕ್ರಮ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News