ಪ್ರತಿ ತಾಲೂಕಿನಲ್ಲಿ ಎಸಿಬಿ ಪೊಲೀಸ್ ಠಾಣೆ ನಿರ್ಮಾಣ ಕೋರಿ ಹೈಕೋರ್ಟ್‍ಗೆ ಪಿಐಎಲ್ ಸಲ್ಲಿಕೆ

Update: 2021-10-20 11:23 GMT

ಬೆಂಗಳೂರು, ಅ.20: ರಾಜ್ಯದ ಪ್ರತಿ ತಾಲೂಕಿನಲ್ಲೂ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುರುನಾಥ ವಡ್ಡೆ ಈ ಪಿಐಎಲ್ ಸಲ್ಲಿಸಿದ್ದು, ಅರ್ಜಿಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಎಸಿಬಿ ನಿರ್ದೇಶಕರನ್ನು ಪ್ರತಿವಾದಿಯನ್ನಾಗಿಸಲಾಗಿದೆ. 

ಭ್ರಷ್ಟಾಚಾರ ಪ್ರಕರಣಗಳನ್ನು ತಡೆಯಲು ರಾಜ್ಯದಲ್ಲಿ ಎಸಿಬಿ ರಚನೆ ಮಾಡಲಾಗಿದ್ದು, ಸದ್ಯ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಎಸಿಬಿ ಪೊಲೀಸ್ ಠಾಣೆಗಳನ್ನು ನಿರ್ಮಾನ ಮಾಡಲಾಗಿದೆ. ಇದೀಗ ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಸೇರಿ ತಾಲೂಕು ಮಟ್ಟದ ವಿವಿಧ ಸರಕಾರಿ ಕಚೇರಿಗಳ ಮೂಲಕ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. 

ಈ ಯೋಜನೆಗಳ ಕಾಮಗಾರಿಗಳಲ್ಲಿ ಭ್ರಷ್ಟ ಅಧಿಕಾರಿಗಳು, ರಾಜಕಾರಣಿಗಳು ಹಾಗೂ ಗುತ್ತಿಗೆದಾರರು ಅಕ್ರಮ ಎಸಗುವ ಸಾಧ್ಯತೆ ಇದೆ. ಹೀಗಾಗಿ, ಈ ಕುರಿತ ದೂರುಗಳನ್ನು ದಾಖಲಿಸಲು ತಾಲೂಕು ಮಟ್ಟದಲ್ಲಿ ಎಸಿಬಿ  ಲೀಸ್ ಠಾಣೆಗಳನ್ನು ನಿರ್ಮಾಣ ಮಾಡುವ ಅಗತ್ಯವಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News