ಉಡುಪಿ : ಕೋವಿಡ್‌ಗೆ 15 ಮಂದಿ ಪಾಸಿಟಿವ್
ಉಡುಪಿ, ಅ. 20: ಜಿಲ್ಲೆಯಲ್ಲಿ ಇಂದು ಕೋವಿಡ್-19 ಸೋಂಕಿಗೆ 15 ಮಂದಿ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಒಂಭತ್ತು ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 53 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ. ದಿನದಲ್ಲಿ ಸೋಂಕು ದೃಢಪಟ್ಟ 15 ಮಂದಿಯಲ್ಲಿ ಆರು ಮಂದಿ ಪುರುಷರು ಹಾಗೂ ಒಂಭತ್ತು ಮಂದಿ ಮಹಿಳೆಯರು. ಇವರಲ್ಲಿ 14 ಮಂದಿ ಉಡುಪಿ ತಾಲೂಕಿನವರಾದರೆ ಒಬ್ಬರು ಕುಂದಾಪುರದವರು. ಪಾಸಿಟಿವ್ ಬಂದ 15 ಮಂದಿಯಲ್ಲಿ ಆರು ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಉಳಿದ ಒಂಭತ್ತು ಮಂದಿಗೆ ಅವರವರ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬುಧವಾರ 9 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,087ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3411 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,616ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 11,92,412 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಲಾಗಿದೆ.
928 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 928 ಮಂದಿ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 84 ಮಂದಿ ಮೊದಲ ಡೋಸ್ ಹಾಗೂ 844 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 53 ಮಂದಿ ಮೊದಲ ಡೋಸ್ ಹಾಗೂ 551 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 31 ಮಂದಿ ಮೊದಲ ಡೋಸ್ ಹಾಗೂ 293 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 9,07,455 ಮಂದಿ ಮೊದಲ ಡೋಸ್ ಹಾಗೂ 4,67,044 ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.