ಟ್ವೆಂಟಿ-20 ವಿಶ್ವಕಪ್ ಅಭ್ಯಾಸ ಪಂದ್ಯ:ಆಸ್ಟ್ರೇಲಿಯಕ್ಕೆ ಸೋಲುಣಿಸಿದ ಭಾರತ

Update: 2021-10-20 13:32 GMT
photo: twitter

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ನಲ್ಲಿ ಬುಧವಾರ ನಡೆದ ಆಸ್ಟ್ರೇಲಿಯ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭಾರತವು 8 ವಿಕೆಟ್ ಗಳ ಅಂತರದಿಂದ ಜಯ ಸಾಧಿಸಿದೆ. ಈ ಮೂಲಕ ತಾನಾಡಿರುವ ಎರಡೂ ಅಭ್ಯಾಸ ಪಂದ್ಯಗಳನ್ನು ಗೆದ್ದುಕೊಂಡಿದೆ. ಅ.24ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ಸೂಪರ್-12ರ ತನ್ನ ಮೊದಲ ಪಂದ್ಯಕ್ಕೆ ಭರ್ಜರಿ ತಯಾರಿ ನಡೆಸಿದೆ.

ಗೆಲ್ಲಲು 153 ರನ್ ಗುರಿ ಪಡೆದಿದ್ದ ಭಾರತ 17.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿದೆ.

ಹಂಗಾಮಿ ನಾಯಕ ರೋಹಿತ್ ಶರ್ಮಾ(60,41 ಎಸೆತ, 5 ಬೌಂ, 3 ಸಿ.) ಹಾಗೂ ಕೆ.ಎಲ್ ರಾಹುಲ್(39, 31 ಎಸೆತ) ಮೊದಲ ವಿಕೆಟಿಗೆ 68 ರನ್ ಸೇರಿಸಿ ಭರ್ಜರಿ ಆರಂಭ ಒದಗಿಸಿದರು. ಸೂರ್ಯಕುಮಾರ್ ಯಾದವ್(ಔಟಾಗದೆ 38) ಹಾಗೂ ಹಾರ್ದಿಕ್ ಪಾಂಡ್ಯ(ಔಟಾಗದೆ 14) ಇನ್ನೂ 14 ಎಸೆತಗಳು ಬಾಕಿ ಇರುವಾಗಲೇ ತಂಡಕ್ಕೆ ಗೆಲುವು ತಂದುಕೊಟ್ಟರು.

ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತು. 3.1ನೇ ಓವರ್ ನಲ್ಲಿ 11 ರನ್ ಗೆ 3 ವಿಕೆಟ್ ಗಳನ್ನು ಕಳೆದುಕೊಂಡಿದ್ದ ಆಸ್ಟ್ರೇಲಿಯಕ್ಕೆ ಸ್ಟೀವನ್ ಸ್ಮಿತ್ ಆಸರೆಯಾದರು. ಸ್ಮಿತ್  ಸರ್ವಾಧಿಕ ಸ್ಕೋರ್(57, 48 ಎಸೆತ, 7 ಬೌಂಡರಿ)ಗಳಿಸಿದರು. ಮಾರ್ಕಸ್ ಸ್ಟೋನಿಸ್ (ಔಟಾಗದೆ 41) ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ 37 ರನ್ ಗಳಿಸಿದರು. ಭಾರತದ ಬೌಲಿಂಗ್ ವಿಭಾಗದಲ್ಲಿ ಆರ್. ಅಶ್ವಿನ್(2-8) ಯಶಸ್ವಿ ಬೌಲರ್ ಎನಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News