ಐಎಎಸ್/ಕೆಎಎಸ್ ಪರೀಕ್ಷೆ: ಉಚಿತ ತರಬೇತಿಗೆ 720 ಮಂದಿ ನೋಂದಣಿ
Update: 2021-10-20 20:05 IST
ಉಡುಪಿ, ಅ.20: ಉಡುಪಿ ಜಿಲ್ಲಾಡಳಿತದಿಂದ ನಡೆಸಲಾಗುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಈಗಾಗಲೇ 720 ಅಧಿಕ ಮಂದಿ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ. ಈ ಎಲ್ಲಾ ಅಭ್ಯರ್ಥಿ ಗಳಿಗೆ ಅ.22ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಗಿದೆ.
ಕಾರ್ಯಾಗಾರದಲ್ಲಿ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾ ಗುವುದು. ಈಗಾಗಲೇ ತರಬೇತಿಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಅಂದು ಬೆಳಗ್ಗೆ 9:30ಕ್ಕೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಹಾಜರಿರುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.