ದಶಕದ ಸಂಭ್ರಮದಲ್ಲಿ ನಮ್ಮ ಮೆಟ್ರೋ

Update: 2021-10-20 16:05 GMT

ಬೆಂಗಳೂರು, ಅ.20: ನಮ್ಮ ಮೆಟ್ರೋ 10 ವರ್ಷಗಳನ್ನು ಪೂರೈಸಿದ್ದ, 2011ರ ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭಿಸಿತ್ತು. ನಮ್ಮ ಮೆಟ್ರೋ ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ 6 ಕಿ.ಮೀ. ಮಾರ್ಗದಲ್ಲಿ ಮೊದಲ ಬಾರಿಗೆ ಸಂಚರಿಸಿತ್ತು. ಪ್ರಸ್ತುತ ನಗರದಲ್ಲಿ ನಮ್ಮ ಮೆಟ್ರೋ 56 ಕಿ.ಮೀ. ಸಂಚಾರ ನಡೆಸುತ್ತಿದೆ. 

ನಮ್ಮ ಮೆಟ್ರೋಗೆ ದಶಕ ಪೂರೈಸಿದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಿಕರಿಗೆ, ಮೆಟ್ರೋಗೆ ಭೂಮಿ ನೀಡಿದವರಿಗೆ ಬಿಎಂಆರ್‍ಸಿಎಲ್‍ನ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ 2024ರ ಡಿಸೆಂಬರ್ ಅಂತ್ಯದ ವೇಳೆಗೆ ಮೆಟ್ರೋ ಕಾಮಗಾರಿಗಳೆಲ್ಲವೂ ಪೂರ್ಣವಾಗಲಿದೆ. ಮುಂಬರುವ ದಿನಗಳಲ್ಲಿ ನಮ್ಮ ಮೆಟ್ರೋ ನಗರದಲ್ಲಿ 175 ಕಿ.ಮೀ. ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ.

ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024ಕ್ಕೆ ನಿಗದಿಪಡಿಸಲಾಗಿದೆ. ಅದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News