ಅ.21ರಂದು ಅನೈತಿಕ ಪೊಲೀಸ್ ಗಿರಿ ವಿರೋಧಿಸಿ ಪ್ರತಿಭಟನೆ
Update: 2021-10-20 21:38 IST
ಉಡುಪಿ, ಅ.20: ಅನೈತಿಕ ಪೊಲೀಸ್ ಗಿರಿ ಮತ್ತು ಅದನ್ನು ಸಮರ್ಥಿಸಿಕೊಳ್ಳುವ ರೀತಿಯ ಮುಖ್ಯಮಂತ್ರಿಯವರ ಹೇಳಿಕೆಯನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕರೆಯಂತೆ ಅ.21ರಂದು ಬೆಳಗ್ಗೆ 11ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಹಬಾಳ್ವೆ ಉಡುಪಿ ಅಧ್ಯಕ್ಷ ಅಮೃತ್ ಶೆಣೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.