ಸಾರ್ವಜನಿಕರ ಆಕ್ರೋಶ; ರಸ್ತೆಗುಂಡಿಗಳನ್ನು ಮುಚ್ಚಲು ಮುಂದಾದ ಬಿಬಿಎಂಪಿ

Update: 2021-10-20 18:20 GMT

ಬೆಂಗಳೂರು, ಅ. 20: ರಸ್ತೆಗುಂಡಿಗಳನ್ನು ಮುಚ್ಚಲು ಪಾಲಿಕೆಯು ಸಂಪೂರ್ಣ ವಿಫಲವಾಗಿದೆ. ಕಳೆದ ಒಂದು ತಿಂಗಳಿಂದ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಸ್ತೆಗುಂಡಿಗಳಲ್ಲಿ ನೀರು ನಿಂತು ವಾಹನ ಸವಾರರು ಪರಾದಾಡುವಂತಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ರಾಜಕೀಯ ಪಕ್ಷಗಳು ಸೇರಿದಂತೆ ನಗರದ ಸಂಘ-ಸಂಸ್ಥೆಗಳು ರಸ್ತೆಗುಂಡಿಗಳನ್ನು ಮುಚ್ಚುವಂತೆ ಬಿಬಿಎಂಪಿ ಮೇಲೆ ಒತ್ತಡ ಏರುತ್ತಲೇ ಇವೆ. ಆದರೆ ಪಾಲಿಕೆ ಬಿಡಬ್ಲ್ಯೂಎಸ್‍ಎಸ್‍ಬಿ, ಬಿಎಂಆರ್‍ಸಿಎಲ್ ಮತ್ತು ಬೆಸ್ಕಾಂ ಕಾಮಗಾರಿಗಳು ನಡೆಯುತ್ತಿರುವುದರಿಂದ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ತಡವಾಗುತ್ತಿದೆ ಎಂಬ ಸಮರ್ಥನೆಯನ್ನೇ ನೀಡುತ್ತಾ ಬಂದಿದೆ. ಈಗ ಒತ್ತಡ, ಪ್ರತಿಭಟನೆಗಳು ಹೆಚ್ಚಾಗಿದ್ದರಿಂದ ಹಂತಹಂತವಾಗಿ ನಗರದಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಮುಂದಾಗುತ್ತಿದೆ.

ಬುಧವಾರ ನಗರದ ಬಸವೇಶ್ವರ ನಗರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಎಚ್‍ಎಸ್‍ಆರ್ ಲೇಔಟ್, ಬೊಮ್ಮನಹಳ್ಳಿ ವಲಯಗಳಲ್ಲಿ ರಸ್ತೆಗುಂಡಿಗಳನ್ನು ಮುಚ್ಚಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News