ಉತ್ತರಾಖಂಡ ಪ್ರವಾಹ; ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ತಂಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-10-21 07:14 GMT

ಹುಬ್ಬಳ್ಳಿ ,‌ಅ.21: ಉತ್ತರಾಖಂಡದಲ್ಲಿ ಭೂಕುಸಿತ ಸಂಭವಿಸುತ್ತಿದ್ದು, ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರಿಗೆ ನೆರವು ಒದಗಿಸಲು ಅಧಿಕಾರಿಗಳನ್ನು  ನಿಯೋಜಿಸಲಾಗಿದೆ ಎಂದು ಮುಖ್ಯಮಮತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಹುಬ್ಬಳ್ಳಿ-ಧಾರವಾಡ  ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಕವಾಯತು ಮೈದಾನ ದ‌ ಬಳಿ‌ ಆಯೋಜಿಸಿರುವ "ಪೋಲಿಸ್ ಸಂಸ್ಮರಣಾ ದಿನಾಚರಣೆ" ಕಾರ್ಯಕ್ರಮದ‌ ನಂತರ  ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ  ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಮಹಿಳೆಯರ ಆತ್ಮರಕ್ಷಣೆಗಾಗಿ ತರಬೇತಿ  ನೀಡುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,ಕೆಎಸ್ ಆರ್ ಪಿ ಪಡೆ ಹಾಗೂ ಪೋಲಿಸ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳ ಸೇವೆ ಹಾಗೂ ಅನುಭವವನ್ನು ಬಳಸಿಕೊಂಡು ಈ ತರಬೇತಿಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ನಾಗರಿಕರ ಸುರಕ್ಷತೆಗಾಗಿ ಪೊಲೀಸರು ಮಾಡುವ ಸೇವೆ ತ್ಯಾಗವನ್ನು ಸ್ಮರಣೆ ಮಾಡಬೇಕು. ನಮ್ಮ ನಾಗರಿಕ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವಿದು. ಪೊಲೀಸರು ಜನಸ್ನೇಹಿ ಯಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News