ಮಧ್ಯಪ್ರದೇಶ: ಐಎಎಫ್ ವಿಮಾನ ಪತನ

Update: 2021-10-21 07:51 GMT

ಗ್ವಾಲಿಯರ್ :ಭಾರತೀಯ ವಾಯುಪಡೆಯ (ಐಎಎಫ್) ವಿಮಾನ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಐಎಎಫ್ ಮಿರಾಜ್ 2000 ವಿಮಾನವು ಇಂದು ಬೆಳಿಗ್ಗೆ ಕೇಂದ್ರ ವಲಯದಲ್ಲಿ ತರಬೇತಿ ಸಮಯದಲ್ಲಿ ತಾಂತ್ರಿಕ ದೋಷವನ್ನು ಎದುರಿಸಿದೆ. ಪೈಲಟ್ ಸುರಕ್ಷಿತವಾಗಿ ಹೊರ ಬಂದರು. ಅಪಘಾತದ ಕಾರಣವನ್ನು ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ" ಎಂದು ಐಎಎಫ್ ಟ್ವೀಟ್ ಮಾಡಿದೆ.

ಜಿಲ್ಲೆಯ ಮಂಕಾಬಾಗ್ ಗ್ರಾಮದಲ್ಲಿ ವಿಮಾನ ಪತನವಾಗುವ ಮುನ್ನ ಪೈಲಟ್ ಸುರಕ್ಷಿತವಾಗಿ ಹೊರಬಂದರು ಎಂದು ಭಿಂಡ್ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಸಿಂಗ್ ಪಿಟಿಐಗೆ ತಿಳಿಸಿದರು.

ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಪೈಲಟ್ ಅನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು. ವಿಮಾನವು ಗ್ವಾಲಿಯರ್‌ನ ಮಹಾರಾಜಪುರ ವಾಯುನೆಲೆಯಿಂದ ಬೆಳಿಗ್ಗೆ ಹೊರಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News