ಹಿಂಗಾರು ಪ್ರವೇಶ: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2021-10-21 15:39 GMT

ಬೆಂಗಳೂರು, ಅ.21: ರಾಜ್ಯದಲ್ಲಿ ಅ.25ರವರೆಗೂ ಭಾರೀ ಮಳೆಯಾಗಲಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂಗಾರು ಮಳೆ ಗುರುವಾರದಿಂದ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅ.22ರಿಂದ 25ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರಲ್ಲಿ ಮಳೆ ತುಸು ಕಡಿಮೆಯಾಗಿದ್ದರೂ, ಮುಂದಿನ ದಿನಗಳಲ್ಲಿ ಅಬ್ಬರ ಮತ್ತೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಅ.22 ಮತ್ತು 23ರಂದು ರಾಜಧಾನಿಗೆ ಹವಾಮಾನ ಇಲಾಖೆಯು ಯೆಲ್ಲೊ ಅಲರ್ಟ್ ನೀಡಿದೆ. 

ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News