ಕಲಬುರಗಿ; ಲಿಂಗತ್ವ ಅಲ್ಪಸಂಖ್ಯಾತರ ವಿರೋಧಿ ಪದ ಬಳಕೆ: ವಿಶ್ವ ಹಿಂದೂ ಪರಿಷತ್ ವಿರುದ್ಧ ದೂರು

Update: 2021-10-22 11:45 GMT
ಪೊಲೀಸ್ ಆಯುಕ್ತರಿಗೆ ದೂರು  

ಕಲಬುರಗಿ: ವಿಶ್ವ ಹಿಂದೂ ಪರಿಷತ್ ಬುಧವಾರ ನಗರದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಸಿರುವ ತನ್ನ ಪ್ರತಿಭಟನೆಯಲ್ಲಿ ಲೈಂಗಿಕ ಲಿಂಗತ್ವ ಅಲ್ಪಸಂಖ್ಯಾತರ ವಿರೋಧಿ ಪದಗಳು ಬಳಸಿ ಸಮುದಾಯಕ್ಕೆ ನೋವು ಉಂಟು ಮಾಡಿದ್ದಾರೆ ಎಂದು 'ಸ್ನೇಹ ಸೊಸೈಟಿ' ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

ಪ್ರತಿಭಟನೆಯಲ್ಲಿ ಲೈಂಗಿಕ ಲಿಂಗತ್ವ ಅಲ್ಪಸಂಖ್ಯಾತರನ್ನು ಅತ್ಯಾಚಾರ, ಹಿಂಸಾಚಾರಿಗಳಿಗೆ ಹೋಲಿಕೆ ಮಾಡಿ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್ ಸಾರ್ವಜನಿಕವಾಗಿ ಸಮುದಾಯಕ್ಕೆ ಕ್ಷಮೆ ಯಾಚಿಸಬೇಕು ಇಲ್ಲದಿದಲ್ಲಿ ರಾಜ್ಯ ಮಟ್ಟದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಹೋರಾಟ ನಡೆಸಬೇಕಾಗುತ್ತದೆ ಎಂದು ಪೊಲೀಸ್ ಆಯುಕ್ತರಿಗೆ ನೀಡಿದ ಮನವಿ ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News