ಬಿಡಿಎ ಅಧ್ಯಕ್ಷರಾಗಿ ಎಸ್.ಆರ್.ವಿಶ್ವನಾಥ್ ನೇಮಕ ಪ್ರಶ್ನಿಸಿ ಅರ್ಜಿ; ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2021-10-21 17:29 GMT

ಬೆಂಗಳೂರು, ಅ.21: ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ಈ ಕುರಿತು ನಗರದ ವಕೀಲ ಎ.ಎಸ್.ಹರೀಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಎಸ್.ಆರ್.ವಿಶ್ವನಾಥ್ ಅವರನ್ನು ನಿಯಮ ಬಾಹಿರವಾಗಿ ಬಿಡಿಎ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹೀಗಾಗಿ, ಅಧ್ಯಕ್ಷಸ್ಥಾನದಿಂದ ಅವರನ್ನು ಅನೂರ್ಜಿತಗೊಳಿಸುವಂತೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News