ರಿಯಾನಾ ಧೃತಿ ಫೆರ್ನಾಂಡಿಸ್ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆ

Update: 2021-10-22 06:47 GMT

ಮಂಗಳೂರು, ಅ.22: ಬೆಂಗಳೂರಿನ ಬಸವನಗುಡಿಯಲ್ಲಿ ಸೆ. 24 ರಿಂದ ಸೆ. 28 ರ ವರೆಗೆ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಿವನ್ ಅಕ್ವ ಸೆಂಟರಿನ ಈಜುಕೊಳದಲ್ಲಿ ತರಬೇತಿ ಪಡೆಯುತ್ತಿರುವ ರಿಯಾನಾ ಧೃತಿ ಫೆರ್ನಾಂಡಿಸ್ ಒಂದು ಚಿನ್ನ, ಎರಡು ಬೆಳ್ಳಿ, ಮೂರು ಕಂಚಿನ ಪದಕಗಳನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರು ಲೋಕರಾಜ್ ವಿಟ್ಲ ಮತ್ತು ಯಜೇಶ್ ಬೆಂಗ್ರೆ ಅವರಿಂದ ತರಬೇತಿ ಪಡೆಯುತ್ತಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News