ಬೆಂಗಳೂರಿನಲ್ಲಿ ರಸ್ತೆಗುಂಡಿ ಸಮಸ್ಯೆ: ಅಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲು

Update: 2021-10-22 12:05 GMT

ಬೆಂಗಳೂರು, ಅ. 22: ನಗರದಲ್ಲಿ ರಸ್ತೆಗಳನ್ನು ಮುಚ್ಚುವಲ್ಲಿ ಅಧಿಕಾರಿಗಳು ನಿರ್ಲಕ್ಷ ವಹಿಸುತ್ತಿದ್ದಾರೆ. ಇದರಿಂದ ನಗರದಲ್ಲಿ ವಾಹನದಟ್ಟಣೆ ಹೆಚ್ಚುತ್ತಿದೆ. ಅಲ್ಲದೆ ರಸ್ತೆಅಪಘಾತ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಬೆಂಗಳೂರು ನಗರ ಸಂಚಾರಿ ಪೊಲೀಸರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. 

ಹೆಚ್ಚುವರಿ ಆಯುಕ್ತ (ಸಂಚಾರಿ ವಿಭಾಗ) ಬಿ.ಆರ್.ರವಿಕಾಂತೇಗೌಡ ಈ ಕುರಿತು ಮಾತನಾಡಿ, ಪುಲಿಕೇಶಿನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ರಸ್ತೆಗುಂಡಿ ಮುಚ್ಚದೆ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದರಿಂದ ಅಪಘಾತ ಸಂಭವಿಸಿದ್ದು, ವ್ಯಕ್ತಿಯೊಬ್ಬರು ಮೃತ ಪಟ್ಟಿರುವುದು ತನಿಖೆಯಿಂದ ಬಹಿರಂಗವಾಗಿದೆ. ಆದುದರಿಂದ ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಯ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಮತ್ತೊಂದೆಡೆ, ರಸ್ತೆಗುಂಡಿಯಿಂದ ಮಹಿಳೆ ಪ್ರಾಣ ಕಳೆದುಕೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡಬ್ಲ್ಯೂಎಸ್‍ಎಸ್‍ಬಿ ಅಧಿಕಾರಿಯ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ತಿಳಿಸಿದರು.   

ಪೊಲೀಸರು ರಸ್ತೆಗುಂಡಿಗಳ ಚಿತ್ರಗಳನ್ನು ಸೆರೆಹಿಡಿದು ಬಿಬಿಎಂಪಿ, ಪಿಡಬ್ಲ್ಯೂಡಿ ಮತ್ತು ಬಿಡಿಎಗಳ ಗಮನಕ್ಕೆ ತರಲು ಆನ್‍ಲೈನ್‍ನಲ್ಲಿ ಅ ಮಾಡಲಾಗುತ್ತಿದೆ. ಇದಲ್ಲದೆ, ಟ್ರಾಫಿಕ್ ಪೊಲೀಸರು ನಗರದಲ್ಲಿ ಸುಮಾರು 500 ರಸ್ತೆಗುಂಡಿಗಳನ್ನು ಮುಚ್ಚಿದ್ದಾರೆ. ನಗರದಲ್ಲಿ ರಸ್ತೆಗುಂಡಿಗಳನ್ನು ಮುಚ್ಚಿದರೆ, ರಸ್ತೆ ಅಪಘಾತಗಳು ಕಡಿಮೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News