ದ.ಕ. ಜಿಲ್ಲೆಯಲ್ಲಿ ಶೇ.88 ಮಂದಿಗೆ ಒಂದು ಡೋಸ್ ಕೋವಿಡ್ ಲಸಿಕೆ: ಎಸ್.ಅಂಗಾರ

Update: 2021-10-22 12:37 GMT

ಮಂಗಳೂರು,ಅ.22: ದೇಶದಲ್ಲಿ 100 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.88 ಮಂದಿಗೆ ಒಂದು ಡೋಸ್ ಲಸಿಕೆ ನೀಡಲಾಗಿದೆ. ಶೇ.45 ಮಂದಿ ಎರಡು ಡೋಸ್ ಲಸಿಕೆ ಪಡೆದು ಕೊಂಡಿದ್ದಾರೆ. ಈ ಸಾಧನೆಗೆ ಜಿಲ್ಲೆಯ ಅಧಿಕಾರಿ ವರ್ಗದವರಿಗೆ ಆರೋಗ್ಯ ಇಲಾಖೆಯ ಸಿ ಬ್ಬಂದಿಗೆ ಸಹಕಾರ ನೀಡಿದ ಸಂಘ ಸಂಸ್ಥೆಗಳು, ಜನಪ್ರತಿ ನಿಧಿಗಳು ಹಾಗೂ ದೇಶದ ಪ್ರಧಾನಿ ಮತ್ತು ರಾಜ್ಯದ ಮುಖ್ಯಮಂತ್ರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಹಾಗೂ ದ.ಕ ಜಿಲ್ಲಾ ಕೋವಿಡ್ ನಿಯಂತ್ರಣದ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ 17,15,000 ಜನರಿಗೆ ಕೋವಿಡ್ ನಿಯಂತ್ರಣ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈ ಪೈಕಿ 15,14,834 ಮಂದಿಗೆ ಒಂದು ಡೋಸ್ ಲಸಿಕೆ ನೀಡಲಾಗಿದೆ. 7,67,937 ಮಂದಿಗೆ ಎರಡು ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

* ಸರಕಾರವು ಕಾನೂನು ಕೈ ಗೆತ್ತಿಕೊಳ್ಳುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡುತ್ತಿದೆ. ದ.ಕ. ಜಿಲ್ಲೆಯಲ್ಲೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈ ಗೊಳ್ಳಲು ಸರಕಾರ ನಿರ್ದೇಶನ ನೀಡಿದೆ ಎಂದು ಅಂಗಾರ ತಿಳಿಸಿದ್ದಾರೆ.

*ಮರಳುಗಾರಿಕೆ ಸಮಸ್ಯೆ ಪರಿಹಾರದ ಬಗ್ಗೆ ರಾಜ್ಯದ ಗಣಿಗಾರಿಕೆ ಸಚಿವರ ಜೊತೆ ಸಮಾಲೋಚನೆ ನಡೆಸಲಾಗಿದೆ. 32 ಗುತ್ತಿಗೆದಾರರಿಗೆ ಮರಳುಗಾರಿಕೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ ಎಂದು ಅಂಗಾರ ಹೇಳಿದ್ದಾರೆ.

 *ಮೀನುಗಾರಿಕೆಗೆ ಸಂಬಂಧಿಸಿದಂತೆ ಈ ಹಿಂದೆ ನಿಗದಿ ಮಾಡಿದ ಯೋಜನೆಗಳನ್ನು ಮುಂದಿನ ಬಜೆಟ್ ಮಂಡನೆಗೆ ಮುನ್ನ ಪೂರ್ಣಗೊಳಿಸಲಾಗುವುದು. ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆ ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿದೆ. ಪ್ರಧಾನ ಮಂತ್ರಿ ಆತ್ಮ ನಿರ್ಬರ ಯೋಜನೆಯ ಮೂಲಕ ಸ್ವ ಉದ್ಯೋಗದಲ್ಲಿ ತೊಡಗಿಸುವ ಗುಂಪುಗಳಿಗೆ ಸರಕಾರ ನೆರವು ನೀಡುತ್ತಿದೆ ಎಂದು ಸಚಿವ ಅಂಗಾರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರತಾಪ್ ಸಿಂಹ ನಾಯಕ್, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಬಿಜೆಪಿ ಮುಖಂಡರಾದ ರಾಧಾಕೃಷ್ಣ, ಕಸ್ತೂರಿ ಪಂಜ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News