ಸಾಧನೆಗೆ ಹೆಮ್ಮೆ ಪಡೋಣ, ವಿಶ್ರಮಿಸುವುದು ಬೇಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-10-22 13:53 GMT

ಹುಬ್ಬಳ್ಳಿ, ಅ.22: ದೇಶದಲ್ಲಿ 100 ಕೋಟಿ ಕೋವಿಡ್ ಲಸಿಕಾಕರಣದ ಸಾಧನೆಗೆ ನಾವೆಲ್ಲರೂ ಹೆಮ್ಮೆ ಪಡೋಣ. ಆದರೆ ವಿಶ್ರಮಿಸುವುದು ಬೇಡ. ಬರುವ ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಅರ್ಹರೆಲ್ಲರಿಗೂ ಶೇ.90ರಷ್ಟು ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ಹುಬ್ಬಳ್ಳಿಯ ಕಿಮ್ಸ್ ಆವರಣದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ‘100 ಕೋಟಿ ಲಸಿಕಾಕರಣ-ಭಾರತ ದೇಶದ ಪಯಣ’ ಕಾರ್ಯಕ್ರಮ ಉದ್ಘಾಟನೆ ಹಾಗೂ ಮಕ್ಕಳಲ್ಲಿ ನ್ಯುಮೋನಿಯಾ ತಡೆಯುವ ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ ಸಮರ್ಪಣೆ ಮಾಡಿ ಅವರು ಮಾತನಾಡಿದರು.

ಕೋವಿಡ್ ಅಲೆಗಳು ರಾಜ್ಯ ಮತ್ತು ದೇಶದ ಆರೋಗ್ಯ ವ್ಯವಸ್ಥೆಯ ಸಾಮಥ್ರ್ಯ ಮತ್ತು ಕೊರತೆಗಳೆರಡನ್ನೂ ಪರಿಚಯಿಸಿವೆ. ಜೊತೆಗೆ ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳಲ್ಲಿ ಗುಣಾತ್ಮಕ ಮತ್ತು ಗಮನಾರ್ಹ ಅಭಿವೃದ್ಧಿ ತರಲು ಕಾರಣವಾಗಿವೆ. ಭಾರತ ದೇಶದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ 100 ಕೋಟಿ ಕೋವಿಡ್ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದಕ್ಕಾಗಿ ಹೆಮ್ಮೆ ಪಡೋಣ; ಆದರೆ ವಿಶ್ರಮಿಸುವುದು ಬೇಡ ಎಂದು ಅವರು ತಿಳಿಸಿದರು.

ವಿಪತ್ತನ್ನು ಕೂಡ ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಬೇಕು(ಅoಟಿveಡಿಣ ಛಿಚಿಟಚಿmiಣಥಿ iಟಿಣo oಠಿಠಿoಡಿಣuಟಿiಣಥಿ) ಎಂಬ ಮಾತನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ನಿಜ ಮಾಡಿ ತೋರಿಸಿದೆ. ಕೋವಿಡ್ ವೈರಾಣು ಕಾಲಿಟ್ಟಾಗ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪಿಪಿಇ ಕಿಟ್, ಮಾಸ್ಕ್, ಕೈಗವಸುಗಳಿರಲಿಲ್ಲ. ಇಂದು ಈ ಉತ್ಪನ್ನಗಳನ್ನμÉ್ಟೀ ಅಲ್ಲ, ಕೋವಿಡ್ ಲಸಿಕೆಯನ್ನು ಕೂಡ ರಫ್ತು ಮಾಡುವ ಸಾಮಥ್ರ್ಯ ಗಳಿಸಿಕೊಂಡಿದ್ದೇವೆ. ಭಾರತದ ಈ ಸಾಧನೆಗೆ ವಿಶ್ವವೇ ಬೆರಗಾಗಿದೆ ಎಂದು ಅವರು ನುಡಿದರು.

ಕಳೆದ ಜನವರಿ 16 ರಿಂದ ದೇಶದಲ್ಲಿ ಕೋವಿಡ್ ಲಸಿಕೆ ನೀಡಲು ಪ್ರಾರಂಭಿಸಲಾಯಿತು. ಹಂತ ಹಂತವಾಗಿ ಹೆಚ್ಚಳ ಮಾಡುತ್ತ ಇದೀಗ ಕೇವಲ ಹತ್ತು ತಿಂಗಳ ಅವಧಿಯಲ್ಲಿ 100 ಕೋಟಿ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದರ ಹಿಂದೆ ವೈದ್ಯರು, ಅರೆವೈದ್ಯಕೀಯ, ಆರೋಗ್ಯ ಕಾರ್ಯಕರ್ತರ, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯ ಶ್ರಮವಿದೆ. ಈ ಸಂದರ್ಭದಲ್ಲಿ ಅವರೆಲ್ಲರನ್ನೂ ಅಭಿನಂದಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ಇನ್ನು 3-4 ತಿಂಗಳ ಅವಧಿಯಲ್ಲಿ ಮತ್ತೆ ನೂರು ಕೋಟಿ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ರಾಜ್ಯದಲ್ಲಿಯೂ ಡಿಸೆಂಬರ್ ಅಂತ್ಯದ ವೇಳೆಗೆ ಶೇ.90 ರಷ್ಟು ಜನರಿಗೆ ಮೊದಲ ಡೋಸ್ ಹಾಗೂ ಶೇ. 70 ರಷ್ಟು ಎರಡನೇ ಡೋಸ್ ಲಸಿಕೆ ನೀಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುವಾಗ ಲಸಿಕಾಕರಣವೇ ಮದ್ದು ಎಂಬುದು ನೂರು ವರ್ಷಗಳ ಹಿಂದೆಯೇ ಸಾಬೀತಾಗಿದೆ. ಪೆನ್ಸಿಲಿನ್‍ಲಿಂದ ಪೊಲಿಯೋವರೆಗೆ ಅನೇಕ ಲಸಿಕೆಗಳು ಮನುಷ್ಯನಿಗೆ ಬಾಹ್ಯವಾಗಿ ಶಕ್ತಿ ತುಂಬಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲಾಗಿದೆ. ವೈರಾಣುಗಳಿಗೆ ಭೌಗೋಳಿಕ ಗಡಿಗಳು ಇರುವುದಿಲ್ಲ. ಅಣುಸ್ಫೋಟದಂತೆ ಅದು ವೇಗವಾಗಿ ಹರಡಬಲ್ಲದು. ವೈರಾಣು ರೂಪಾಂತರಗೊಳ್ಳುವುದು ನಮ್ಮ ಮುಂದಿರುವ ಸವಾಲಾಗಿದೆ. ವಿಜ್ಞಾನಿಗಳು ಈ ನಿಟ್ಟಿನಲ್ಲಿ ಸಂಶೋಧನೆಗಳಲ್ಲಿ ಕಾರ್ಯತತ್ಪರರಾಗಿದ್ದಾರೆ ಎಂದು ಅವರು ನುಡಿದರು.

ಕೋವಿಡ್‍ನಿಂದಾಗಿ ದೇಶ ಮಾತ್ರವಲ್ಲ ಇಡೀ ವಿಶ್ವ ಸಮುದಾಯದ ಒಟ್ಟು ಆರೋಗ್ಯ ಸದೃಢವಾಗಿರಬೇಕು ಎಂಬ ಪಾಠ ಕಲಿತಿದ್ದೇವೆ. ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿದೆ. ನಮ್ಮ ರಾಜ್ಯದ ಆಸ್ಪತ್ರೆಗಳಲ್ಲಿ ಒಂದೇ ವರ್ಷದಲ್ಲಿ 1 ಲಕ್ಷ 25 ಸಾವಿರ ಹಾಸಿಗೆಗಳ ಸಾಮಥ್ರ್ಯ ಹೆಚ್ಚಾಗಿದೆ. 4 ಸಾವಿರ ವೈದ್ಯಾಧಿಕಾರಿಗಳ ನೇಮಕ ಮಾಡಿಕೊಳ್ಳಲಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿಯೂ ಆಕ್ಸಿಜನ್ ಬೆಡ್‍ಗಳ ಸೌಲಭ್ಯ ಸ್ಥಾಪನೆಯಾಗಿವೆ. ವೈದ್ಯಕೀಯ ಆಮ್ಲಜನಕ ಉತ್ಪಾದನೆ ಹಾಗೂ ಪೂರೈಕೆ ಸಮರ್ಪಕ ಮತ್ತು ಸಶಕ್ತವಾಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಕಿಮ್ಸ್ ಸೇವೆ ಶ್ಲಾಘನೆ: ಉತ್ತರ ಕರ್ನಾಟಕದ ಹೆಮ್ಮೆಯ ಹಾಗೂ ಬಡವರ ಪಾಲಿನ ಸಂಜೀವಿನಿ ಎಂದೇ ಹೆಸರಾಗಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್)ಯನ್ನು ಈ ಪ್ರದೇಶದ 6 ರಿಂದ 7 ಜಿಲ್ಲೆಗಳು ಅವಲಂಬಿಸಿವೆ. ಕೋವಿಡ್ ಮೊದಲ ಮತ್ತು ಎರಡನೇ ಅವಧಿಯಲ್ಲಿ ಕಿಮ್ಸ್ ನೀಡಿದ ಸೇವೆ ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು.

ಈ ಸಂಸ್ಥೆ ತನ್ನ ಒಟ್ಟು ಸಾಮಥ್ರ್ಯವನ್ನು ಕ್ರೋಡೀಕರಿಸಿ ಸೇವೆ ನೀಡಿದ ಪರಿಣಾಮ ಸಾವಿರಾರು ಜನರ ಪ್ರಾಣ ಉಳಿದಿದೆ. ಬ್ಲ್ಯಾಕ್ ಫಂಗಸ್ ಖಾಯಿಲೆಗೂ ಕಿಮ್ಸ್‍ನಲ್ಲಿ ಪರಿಣಾಮಕಾರಿ ಚಿಕಿತ್ಸೆ ದೊರೆತಿರುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಕ್ತಕಂಠದಿಂದ ಶ್ಲಾಘನೆ ಮಾಡಿದರು.

ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ದೇಶದಲ್ಲಿ ನೂರು ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ವೈದ್ಯರು, ದಾದಿಯರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ ಇದಕ್ಕಾಗಿ ಕಳೆದ ಒಂದೂವರೆ ವರ್ಷದಿಂದ ಹಗಲಿರುಳು ಶ್ರಮಿಸಿದ್ದಾರೆ. ರಾಜ್ಯದ ಜನತೆ ಸಹಕಾರ ನೀಡಿದ್ದಾರೆ. ಅತಿಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಮಕ್ಕಳಿಗೆ ನೀಡುತ್ತಿರುವ ಲಸಿಕೆಗಳ ಜೊತೆಗೆ ನ್ಯುಮೋನಿಯಾ ತಡೆಯಲು ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆಯನ್ನು ಮಗುವಿನ ಒಂದೂವರೆ, ಮೂರುವರೆ ಹಾಗೂ ಒಂಬತ್ತನೇ ತಿಂಗಳ ವಯಸ್ಸಿನಲ್ಲಿ ಈ ಲಸಿಕೆ ಹಾಕಿಸಬೇಕು ಎಂದು ಅವರು ಹೇಳಿದರು. ಲಸಿಕಾಕರಣಕ್ಕೆ ಶ್ರಮಿಸಿದ ವೈದ್ಯರು ಹಾಗೂ ಆರೋಗ್ಯ ಇಲಾಖೆಯ ಎಲ್ಲ ಹಂತಗಳ ಅಧಿಕಾರಿಗಳು, ಸಿಬ್ಬಂದಿಯನ್ನು ಪ್ರಾತಿನಿಧಿಕವಾಗಿ ಮುಖ್ಯಮಂತ್ರಿ ಸನ್ಮಾನಿಸಿ, ಗೌರವಿಸಿದರು.

ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ರಾಜ್ಯ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್, ಆರೋಗ್ಯ ಇಲಾಖೆಯ ಆಯುಕ್ತ ಡಾ.ರಂದೀಪ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ.ಅರುಂಧತಿ, ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News