ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಶತಕೋಟಿ ಕೋವಿಡ್ ಲಸಿಕೆ ವಿತರಣೆ ಸಂಭ್ರಮಾಚರಣೆ

Update: 2021-10-22 15:11 GMT

ಉಡುಪಿ, ಅ. 22: ರಾಷ್ಟ್ರದಲ್ಲಿ ಶತಕೋಟಿ ಲಸಿಕೆ ನೀಡಿದ ಸಾಧನೆ ಪ್ರಯುಕ್ತ ಜಿಲ್ಲಾಡಳಿತ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡಿಎಚ್‌ಒ ಕಚೇರಿ ಆವರಣದಲ್ಲಿ ಆಗಸಕ್ಕೆ 100 ಬಲೂನುಗಳನ್ನು ಹಾರಿ ಬಿಡುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.

ಕಾಯಕ್ರಮದಲ್ಲಿ ಮಾತನಾಡಿದ ಜಿಪಂ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ ಡಾ.ನವೀನ್ ಭಟ್, ದೇಶದಲ್ಲಿ ಮೊದಲ ಕೋವಿಡ್ ಲಸಿಕೆ ನೀಡಲು ಆರಂಭವಾದಾಗಿನಿಂದ, ಇಂದಿನವರೆಗೆ 100 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದಕ್ಕೆ ಕಾರಣವಾದ ಆರೋಗ್ಯ ಇಲಾಖೆ ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ 14 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, 9.15 ಲಕ್ಷ ಮಂದಿ ಮೊದಲ ಡೋಸ್ ಮತ್ತು 4.90 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಎರಡೂ ಡೋಸ್ ಲಸಿಕೆ ಪಡೆಯುವುದರಿಂದ ಮಾತ್ರ ಕೋವಿಡ್‌ನಿಂದ ಸಂಪೂರ್ಣ ರಕ್ಷಣೆ ಪಡೆಯಬಹುದಾಗಿದೆ. ಆದ್ದರಿಂದ ಮೊದಲ ಡೋಸ್ ಪಡೆದ ಎಲ್ಲರೂ 2ನೇ ಡೋಸ್ ಲಸಿಕೆಯನ್ನು ಪಡೆಯುವ ಮೂಲಕ ಕೋವಿಡ್ 3ನೇ ಅಲೆಯಿಂದ ರಕ್ಷಿಸಿಕೊಳ್ಳುವಂತೆ ಹಾಗೂ ಜಿಲ್ಲೆಯನ್ನು ಕೋವಿಡ್ ಮುಕ್ತ ವಾಡಲು ಸಹಕರಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ.ನಾಗಭೂಷಣ್ ಉಡುಪ, ಕೋವಿಡ್ ಲಸಿಕಾ ಆಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಡಾ.ಪ್ರೇಮಾನಂದ, ಡಾ.ಶ್ರೀರಾಮರಾವ್, ಡಾ.ಚಿದಾನಂದ ಸಂಜು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News