ತರಗತಿಗಳಲ್ಲಿ ಹಾಜರಾತಿ ಹೆಚ್ಚುತ್ತಿದೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

Update: 2021-10-22 17:37 GMT

ಬೆಂಗಳೂರು, ಅ. 22: ಶಾಲೆಗಳಲ್ಲಿ ಮಕ್ಕಳ ಹಾಜರಾತಿಯಲ್ಲಿ ಸುಧಾರಣೆ ಕಾಣುತ್ತಿದೆ. ಬಿಸಿಯೂಟವು ಆರಂಭವಾಗಿರುವುದರಿಂದ ಇನ್ನುಮುಂದೆ ಮಕ್ಕಳ ಹಾಜರಾತಿ ಮತಷ್ಟು ಹೆಚ್ಚಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಶಾಲೆಗಳಿಗೆ ಮಕ್ಕಳು ಉತ್ಸಾಹದಿಂದ ಬರುತ್ತಿದ್ದಾರೆ. ಜಿಲ್ಲೆ, ತಾಲೂಕು ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗೆ ಬರುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಅ.21ರಿಂದ ಬಿಸಿಯೂಟ ಆರಂಭಿಸಿರುವ ಕಾರಣ ಹಾಜರಾತಿ ಪ್ರಮಾಣ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ವಿಶ್ವಾಸವಿದೆ.

ಅ.25ರಿಂದ 1 ರಿಂದ 5ನೆ ತರಗತಿಗಳ ಪುನಾರಂಭ ಹಾಗೂ ನವೆಂಬರ್ ಮೊದಲ ವಾರದಲ್ಲಿ ಎಲ್ಲ ತರಗತಿಗಳಿಗೆ ಬಿಸಿಯೂಟ ನೀಡಲಾಗುತ್ತದೆ. ಇದರಿಂದ ಹಾಜರಾತಿ ಮತ್ತಷ್ಟು ಸುಧಾರಣೆಯಾಗುವ ವಿಶ್ವಾಸವಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ವಾಪಸ್ ತರಗತಿಗಳಿಗೆ ಕರೆತರುವ ಪ್ರಯತ್ನವನ್ನು ಶಿಕ್ಷಣ ಇಲಾಖೆ ಮುಂದುವರೆಸಿದೆ’ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News