ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ‘ಇಂಟರ್ ನ್ಯಾಶನಲ್ ಐಕಾನ್ ಅವಾರ್ಡ್’

Update: 2021-10-23 13:13 GMT
ಡಾ. ರಾಜೇಂದ್ರ ಕುಮಾರ್‌

ಮಂಗಳೂರು, ಅ.23: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ‘ಇಂಟರ್ ನ್ಯಾಶನಲ್ ಐಕಾನ್ ಅವಾರ್ಡ್’ಗೆ ಆಯ್ಕೆಗೊಂಡಿದ್ದಾರೆ.

ಹೊಸದಿಲ್ಲಿಯ ಇನ್ಸಿಟಿಟ್ಯೂಟ್ ಅಫ್ ಎಕನಾಮಿಕ್ ಸ್ಟಡೀಸ್ ಸಂಸ್ಥೆ ಶ್ರೀಲಂಕಾದ ಕೊಲಂಬೊ ಗಾಲೇ ಫೇಸ್ ಹೋಟೆಲ್ ಆಡಿಟೋರಿಯಂನಲ್ಲಿ ಅಕ್ಟೋಬರ್ 28ರಂದು ಆಯೋಜನೆ ಮಾಡಿದ ‘ಇಂಡೋ - ಶ್ರೀಲಂಕಾ ಎಕನಾಮಿಕ್ ಕೋ ಆಪರೇಶನ್ ಕಾನ್ಫರೆನ್ಸ್ ನಲ್ಲಿ ಡಾ. ಎಂ ಎನ್. ರಾಜೇಂದ್ರ ಕುಮಾರ್ ಅವರು ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಲಿರುವರು.

ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಧ್ಯಕ್ಷರಾದ ಬಳಿಕ ಎಸ್‌ಸಿಡಿಸಿಸಿ ಬ್ಯಾಂಕಿಗೆ 19 ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 18 ಬಾರಿ ನಬಾರ್ಡ್ ಪ್ರಶಸ್ತಿ, 2 ಬಾರಿ ಬ್ಯಾಂಕಿಂಗ್ ಪ್ರೋಂಟಿಯರ್ಸ್ ಪ್ರಶಸ್ತಿ ಹಾಗೂ ಈಚೆಗೆ ಬ್ಯಾಂಕೊ ಬ್ಲೂ ರಿಬ್ಬನ್ ಪ್ರಶಸ್ತಿ ಲಭಿಸಿದೆ.

ರಾಜೇಂದ್ರ ಕುಮಾರ್ ಅವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಇವರಿಗೆ ಹಲವಾರು ರಾಷ್ಟ್ರೀಯ - ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಮುಖ್ಯವಾಗಿ ಶ್ರೀಲಂಕಾದ ಕೊಲಂಬೊ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

ಕರ್ನಾಟಕ ಸರಕಾರ ‘ಸಹಕಾರ ರತ್ನ’ ಪ್ರಶಸ್ತಿಯನ್ನು ನೀಡಿದೆ . ಮಾತ್ರವಲ್ಲ ‘ಸಹಕಾರ ವಿಶ್ವ ಬಂಧುಶ್ರೀ’ , ‘ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ’, ‘ ಮಹಾತ್ಮಾ ಗಾಂಧಿ ಸಮ್ಮಾನ್ ಪ್ರಶಸ್ತಿ’, ‘ ಬೆಸ್ಟ್ ಚೇರ್ ಮೆನ್ ನ್ಯಾಷನಲ್ ಅವಾರ್ಡ್’, ‘ನ್ಯಾಷನಲ್ ಎಕ್ಸ್‌ಲೆನ್ಸ್ ಎವಾರ್ಡ್’ , ‘ಔಟ್ ಸ್ಟೆಂಡಿಂಗ್ ಗ್ಲೋಬಲ್ ಲೀಡರ್ ಶಿಪ್ ಅವಾರ್ಡ್’, ‘ ಬಹು ಪ್ರಭಾವಶಾಲಿ ಸಹಕಾರ ನಾಯಕ ಪ್ರಶಸ್ತಿ’ ಹೀಗೆ ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳಿಂದ ಇವರು ಪುರಸ್ಕೃತರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News