ವಿದ್ಯಾರ್ಥಿಗಳಿಗೆ ಕನ್ನಡ ಕೈಬರಹ ಸ್ಪರ್ಧೆ

Update: 2021-10-23 17:40 GMT

ಬೆಂಗಳೂರು, ಅ.23: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ಶಾಲಾಕಾಲೇಜುಗಳ ವಿದ್ಯಾರ್ಥಿಗಳಿಗೆ ಕನ್ನಡ ಕೈಬರಹ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸ್ಪರ್ಧೆಯು ಮೂರು ವಿಭಾಗಗಳಲ್ಲಿ ನಡೆಯಲಿದ್ದು, ಪ್ರತಿ ವಿಭಾಗದಲ್ಲೂ ತಲಾ 5000 ರೂ.ಗಳ ಮೂರು ಬಹುಮಾನಗಳನ್ನು ನೀಡಲಾಗುವುದು. ಅ.29ರ ಒಳಗೆ ಬರಹಗಳನ್ನು ತಲುಪಿಸಬೇಕಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಕಲಾಗ್ರಾಮ, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಹಿಂಭಾಗ ಅಥವಾ kbbp-bengaluru@ka.gov.in, 080-23183312/080-23183311 ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News