ಪೆಟ್ರೋಲ್, ಡೀಸೆಲ್ ಬೆಲೆ ಸತತ 4ನೇ ದಿನವೂ ಏರಿಕೆ

Update: 2021-10-23 18:13 GMT

ಹೊಸದಿಲ್ಲಿ, ಅ. 23: ದೇಶಾದ್ಯಂತ ಸತತ ನಾಲ್ಕನೇ ದಿನವಾದ ಶನಿವಾರ ಕೂಡ ಪೇಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಕಂಡಿದೆ.ಪೆಟ್ರೋಲ್ ಬೆಲೆ 35 ಪೈಸೆ ಏರಿಕೆಯಾಗಿದೆ.

ಇದರಿಂದ ದಿಲ್ಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 107.24ಕ್ಕೆ ಏರಿಕೆಯಾಗಿದೆ. ಡೀಸೆಲ್ ಬೆಲೆ ಕೂಡ 35 ಪೈಸೆ ಏರಿಕೆಯಾಗಿದೆ. ಇದರಿಂದ ದಿಲ್ಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 95.97 ರೂಪಾಯಿಗೆ ಏರಿಕೆಯಾಗಿದೆ.

ಮುಂಬೈಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 113.12 ರೂಪಾಯಿ ಹಾಗೂ ಡೀಸೆಲ್ ಬೆಲೆ 104.00 ರೂಪಾಯಿ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 107.78ಕ್ಕೆ ಏರಿಕೆಯಾಗಿದೆ. ಒಂದು ಲೀಟರ್ ಡೀಸೆಲ್ ಬೆಲೆ 99.08ಕ್ಕೆ ಏರಿಕೆಯಾಗಿದೆ. ಚೆನ್ನೈಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 104.22ಕ್ಕೆ ಏರಿಕೆಯಾಗಿದೆ. ಒಂದು ಲೀಟರ್ ಡೀಸೆಲ್ ಬೆಲೆ 100.25 ರೂ.ಗೆ ಏರಿಕೆಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News