×
Ad

ಮಂಗಳೂರು: ಎಂ.ಜಿ. ರಸ್ತೆಯ ಪಬ್‌ಗೆ ಸಿಸಿಬಿ ಪೊಲೀಸರ ದಾಳಿ

Update: 2021-10-23 23:54 IST

ಮಂಗಳೂರು : ನಗರದ ಎಂ.ಜಿ ರಸ್ತೆಯಲ್ಲಿರುವ ಪಬ್‌ವೊಂದರ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ.

ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆಯ
ಇನ್ ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆದಿದೆ.

ಈ ಪಬ್‌ನ್ನು ನಿಗದಿತ ಸಮಯಕ್ಕಿಂತ ಹೆಚ್ಚು  ಹೊತ್ತು ತೆರೆಯಲಾಗುತ್ತಿತ್ತು. ಜೋರಾದ ಧ್ವನಿವರ್ಧಕಗಳನ್ನು ಬಳಸಿ ಅಕ್ಕಪಕ್ಕದ ರಸ್ತೆವರೆಗೂ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು. ಪಬ್ ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ, ಸುತ್ತಾಮುತ್ತಾ ಓಡಾಡುವ ವಿದ್ಯಾರ್ಥಿಗಳಿಗೆ ಮತ್ತು ಸಮೀಪದಲ್ಲೇ ಇರುವ ದೇವಸ್ಥಾನಗಳಿಗೆ ಭಕ್ತರು ಹೋಗಿ ಬರುವುದಕ್ಕೆ ಸಂಜೆಯಿಂದನೆ ತೊಂದರೆಯಾಗುತ್ತಿದೆ ಎಂಬಿತ್ಯಾದಿ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿತ್ತು. ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News