ಜನರಿಗೆ ತೊಂದರೆ ನೀಡುವಲ್ಲಿ ಮೋದಿ ಸರಕಾರ ದಾಖಲೆ ಸೃಷ್ಟಿಸಿದೆ: ಪ್ರಿಯಾಂಕಾ ಗಾಂಧಿ

Update: 2021-10-24 10:07 GMT
photo: Indian express

ಹೊಸದಿಲ್ಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ರವಿವಾರ ಕೇಂದ್ರ ಸರಕಾರದ  ವಿರುದ್ಧ ವಾಗ್ದಾಳಿ ನಡೆಸಿದ್ದು, ಮೋದಿ ಸರಕಾರ ಜನರಿಗೆ ತೊಂದರೆ ನೀಡುವಲ್ಲಿ ದಾಖಲೆ ಸೃಷ್ಟಿಸಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟ್ವಿಟರ್‌ ನಲ್ಲಿ ಮಾಧ್ಯಮ ವರದಿಯೊಂದನ್ನು ಟ್ಯಾಗ್ ಮಾಡಿದ್ದಾರೆ. ಈ ವರ್ಷ ಪೆಟ್ರೋಲ್ ಬೆಲೆಯಲ್ಲಿ 23.53 ರೂ.ಹೆಚ್ಚಳವಾಗಿದೆ ಎಂದು ವರದಿಯಾಗಿದೆ.

''ಸಾರ್ವಜನಿಕರಿಗೆ ತೊಂದರೆ ನೀಡುವಲ್ಲಿ ಮೋದಿ ಸರಕಾರ ದೊಡ್ಡ ದೊಡ್ಡ ದಾಖಲೆ ಮಾಡಿದೆ. ಮೋದಿ ಸರಕಾರದಲ್ಲಿ ಅತಿ ಹೆಚ್ಚು ನಿರುದ್ಯೋಗವಿದೆ.  ಮೋದಿ ಸರಕಾರದಲ್ಲಿ ಸರಕಾರಿ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಮೋದಿ ಸರಕಾರದಲ್ಲಿ ಒಂದು ವರ್ಷದಲ್ಲಿ ಪೆಟ್ರೋಲ್ ದರಗಳು ಗರಿಷ್ಟ ಪ್ರಮಾಣದಲ್ಲಿ ಹೆಚ್ಚಾದವು'' ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಇದೇ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿದರು.  “ಅಚ್ಛೇ ದಿನ್” (ಒಳ್ಳೆಯ ದಿನಗಳು) ಎಂದು ಟ್ವೀಟ್ ಮಾಡುವ ಮೂಲಕ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News