ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Update: 2021-10-24 10:27 GMT

ಬೆಂಗಳೂರು, ಅ.24: ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಮಂಡ್ಯ, ತುಮಕೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಹಾಗೂ ಅ.26ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. 

ಉತ್ತರ ಒಳನಾಡಿನ ಧಾರವಾಡ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳ ಕೆಲವು ಕಡೆ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ಅ.27ರಂದು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News