ನಮಗೆ ಉಪ ಚುನಾವಣೆಗಿಂತ 2023ರ ಸಾರ್ವತ್ರಿಕ ಚುನಾವಣೆ ಮುಖ್ಯ: ಎಚ್.ಡಿ.ಕುಮಾರಸ್ವಾಮಿ

Update: 2021-10-24 15:46 GMT

ಮೈಸೂರು,ಅ.24: ನಮಗೆ ಸಿಂಧಗಿ ಮತ್ತು ಹಾನಗಲ್ ಉಪ ಚುನಾವಣೆಗಿಂತ, 2023 ರ ಸಾರ್ವತ್ರಿಕ ಚುನಾವಣೆ ಮುಖ್ಯ, ಆ ನಿಟ್ಟಿನಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟನೆ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ರವಿವಾರ ಮೈಸೂರು ಜಿಲ್ಲಾ ಪತ್ರಕರ್ತರಸಂಘ  ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾವು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷವನ್ನು ಸೋಲಿಸಬೇಕು ಎಂದು ಕೆಲಸ ಮಾಡುತ್ತಿಲ್ಲ, ನಮ್ಮ ಗುರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು. ಅದಕ್ಕಾಗಿ ರಾಜ್ಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸುತ್ತಿದ್ದೇವೆ. ನಮ್ಮ ಪಕ್ಷದಲ್ಲಿ ದೊಡ್ಡಮಟ್ಟದ ನಾಯಕರಿಲ್ಲ, ಆದರೆ ಸಾಕಷ್ಟು ಕಾರ್ಯಕರ್ತರುಗಳಿದ್ದಾರೆ ಅವರ ಸಹಕಾರದೊಂದಿಗೆ ಪಕ್ಷವನ್ನು  ಕೊಂಡೊಯ್ಯುತ್ತೇವೆ ಎಂದು ಹೇಳಿದರು.

ಸಾರ್ವತ್ರಿಕ ಚುನಾವಣೆಗೆ ಇನ್ನು 18 ತಿಂಗಳಷ್ಟೇ ಬಾಕಿ ಇದ್ದು ಅಲ್ಲಿವರೆಗೆ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇನೆ. ನಮ್ಮನ್ನು ಟೀಕಿಸುವವರಿಗೆ 2023 ರ ಚುನಾವಣೆಯಲ್ಲೇ ಉತ್ತರ ಕೊಡುತ್ತೇನೆ ಎಂದು ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದರು.

ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆಯ ಎರಡೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಅಲ್ಲಿ ನಮಗೆ ಬಿಜೆಪಿಯೇ ಎದುರಾಳಿ ಹೊರತು ಕಾಂಗ್ರಸ್ ಅಲ್ಲ, ಈಗಗಾಲೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News