ಯುವಜನತೆ ಉದ್ಯೋಗದ ಹಕ್ಕಿಗಾಗಿ ಬೀದಿಗಿಳಿಯಬೇಕಾಗಿದೆ: ಮುನೀರ್ ಕಾಟಿಪಳ್ಳ

Update: 2021-10-24 17:03 GMT

ಬಂಟ್ವಾಳ : ತುಳುನಾಡಿನ ಅಭಿವೃದ್ಧಿ ಯಲ್ಲಿ ತುಳುನಾಡಿನ ಯುವಜನರಿಗೆ ದೊಡ್ಡ ಪಾಲು ನೀಡುವಂತೆ ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ನೀಡುವಂತೆ ಆಗ್ರಹಿಸಿ ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಸಮಾವೇಶ ಇಂದು ಬಿ.ಸಿ.ರೋಡಿನಲ್ಲಿ ನಡೆಯಿತು.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಡಿ.ವೈ.ಎಫ್.ಐ ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ಇಂದು ಯುವಜನತೆ ಉದ್ಯೋಗದ ಹಕ್ಕಿಗಾಗಿ ಬೀದಿಗಿಳಿಯಬೇಕಾಗಿದೆ ಆದರೆ ಯುವಜನತೆಯನ್ನು ಧರ್ಮ ಜಾತಿಯ ಹೆಸರಿನಲ್ಲಿ ದಾರಿ ತಪ್ಪಿಸಿ ಅವರು ಬದುಕನ್ನೇ ನಿರ್ನಾಮ ಮಾಡಲು ಕೋಮುವಾದಿ ಶಕ್ತಿಗಳು ಪ್ರಯತ್ನಿಸುತ್ತಿದ್ದು ಯುವಜನತೆ ಎಚ್ಚರಗೊಂಡು ತಮ್ಮ ನಿಜವಾದ ಸಮಸ್ಯೆ ಗಳ ಪರಿಹಾರಕ್ಕಾಗಿ ಸಂಘಟಿತರಾಗಬೇಕೆಂದು ಕರೆ ನೀಡಿದರು.

ಡಿ.ವೈ.ಎಫ್‌.ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ ನಿರುದ್ಯೋಗ ದ ಪ್ರಮಾಣ ಅತಿಯಾಗಿ ಯುವ ಜನತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ಸರಕಾರದ ಹಲವು ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇದ್ದು ಇದನ್ನು ಭರ್ತಿ ಮಾಡಲು ಸರಕಾರ ಮುಂದಾಗುತ್ತಿಲ್ಲ, ನಿರುದ್ಯೋಗಿ ಯುವಜನತೆಯನ್ನು ರಾಜಕೀಯ ಲಾಭಕ್ಕಾಗಿ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.

ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ ವಂದಿಸಿದರು. ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ತುಳಸೀದಾಸ್ ವಿಟ್ಲ ಆರಂಭದಲ್ಲಿ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರು. ಸಮಾವೇಶದಲ್ಲಿ ಬಂಟ್ವಾಳ ತಾಲೂಕು ಸಮಿತಿಯನ್ನು ಪುನರ್ ರಚಿಸಲಾಯಿತು. ಸಮಿತಿಯ ಸಲಹೆಗಾರರಾಗಿ ರಾಜ ಚೆಂಡ್ತಿಮಾರ್, ಅಧ್ಯಕ್ಷರಾಗಿ ಸುರೇಂದ್ರ ಕೋಟ್ಯಾನ್ ಹಾಗು ಕಾರ್ಯದರ್ಶಿಯಾಗಿ ತುಳಸೀದಾಸ್ ವಿಟ್ಲ ಪುನರ್ ಆಯ್ಕೆಯಾದರು.

ಉಪಾಧ್ಯಕ್ಷರು ಗಳಾಗಿ ಸಲ್ಮಾನ್.ಪಿ.ಬಿ, ಸಾಧಿಕ್ ಬಂಟ್ವಾಳ, ಜೊತೆ ಕಾರ್ಯದರ್ಶಿಗಳಾಗಿ ಶಹೀದ್ ಶೈನ್, ಶರೀಫ್ ಮೈಂದಾಳ, ಕೋಶಾಧಿಕಾರಿಗಳಾಗಿ ಉಮೇಶ್ ವಾಮದಪದವು ಹಾಗೂ ಹತ್ತು ಜನರ ಕಾರ್ಯಕಾರಿ ಸಮಿತಿ ರಚಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News