ಬಡಗನ್ನೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲು

Update: 2021-10-25 04:32 GMT
ಸಾಂದರ್ಭಿಕ ಚಿತ್ರ (source: PTI)

ಪುತ್ತೂರು, ಅ.25: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದಾನೆ.

ಸ್ಥಳೀಯ ಬಾಲಕಿ ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News