ಮಧ್ಯಪ್ರದೇಶ: ಉಪಚುನಾವಣೆಗೂ ಮುನ್ನ ಕಾಂಗ್ರೆಸ್ ಶಾಸಕ ಬಿಜೆಪಿಗೆ ಸೇರ್ಪಡೆ

Update: 2021-10-25 05:56 GMT
Shivraj Singh Chouhan/Twitter

ಭೋಪಾಲ್: ಮಧ್ಯಪ್ರದೇಶದ ಬರ್ವಾಹಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಚಿನ್ ಬಿರ್ಲಾ ರವಿವಾರ ಭಾರತೀಯ ಜನತಾ ಪಕ್ಷವನ್ನು ಸೇರಿಕೊಂಡರು. ಖರ್ಗೋನ್ ಜಿಲ್ಲೆಯ ಬೇಡಿಯಾ ಗ್ರಾಮದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ರ್ಯಾಲಿಯಲ್ಲಿ ಬಿರ್ಲಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು ಎಂದು ವರದಿಯಾಗಿದೆ.

ಮಧ್ಯಪ್ರದೇಶದ ಖಾಂಡ್ವಾ ಲೋಕಸಭಾ ಸ್ಥಾನ ಹಾಗೂ  ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರ ಉಪಚುನಾವಣೆಗೆ ಕೆಲವು ದಿನಗಳ ಮೊದಲು ಬಿರ್ಲಾ ಬಿಜೆಪಿಗೆ ಸೇರಿದ್ದಾರೆ. ಬಿರ್ಲಾ ಪ್ರತಿನಿಧಿಸುತ್ತಿರುವ ಬರ್ವಾಹ ವಿಧಾನಸಭಾ ಕ್ಷೇತ್ರವು ಖಾಂಡ್ವಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

ಕಳೆದ ವರ್ಷ ಮಾರ್ಚ್‌ನಲ್ಲಿ ಮಧ್ಯಪ್ರದೇಶದಲ್ಲಿ ಕಮಲ ನಾಥ್ ನೇತೃತ್ವದ ಸರಕಾರ ಪತನಗೊಂಡ ನಂತರ ಬಿರ್ಲಾ ಬಿಜೆಪಿಗೆ ಸೇರ್ಪಡೆಯಾದ 27 ನೇ ಕಾಂಗ್ರೆಸ್ ಶಾಸಕರಾಗಿದ್ದಾರೆ. ಪಕ್ಷದ 22 ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡ ನಂತರ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರಕಾರ ಬಹುಮತ ಕಳೆದುಕೊಂಡಿತ್ತು.

ಆ ನಂತರ ಇನ್ನೂ ನಾಲ್ಕು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News