ರಜನಿಕಾಂತ್, ಕಂಗನಾ, ಧನುಷ್ ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

Update: 2021-10-25 07:49 GMT
Photo: Twitter/@DDNational

ಹೊಸದಿಲ್ಲಿ: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಸೋಮವಾರ ಬೆಳಗ್ಗೆ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ  ಈ ವರ್ಷದ ಆರಂಭದಲ್ಲಿ ಘೋಷಿಸಿದ್ದ 67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಸೂಪರ್ ಸ್ಟಾರ್  ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನಿಸಲಾಯಿತು. ಧನುಷ್ ಹಾಗೂ  ಮನೋಜ್ ಬಾಜಪೇಯಿ ಅವರು ಅತ್ಯುತ್ತಮ ನಟ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಕಂಗನಾ ರಣಾವತ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು

 ಪ್ರಿಯದರ್ಶನ್ ಅವರ ಮರಕ್ಕರ್: ಲಯನ್  ಆಫ್ ದಿ ಅರೇಬಿಯನ್ ಸೀ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡರೆ, ದಿವಂಗತ ಸುಶಾಂತ್ ಸಿಂಗ್ ರಜಪೂತ್ ನಟಿಸಿದ ‘ಚಿಚೋರೆ’ ಗೆ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿಯನ್ನು ನೀಡಲಾಯಿತು.

'ಚಿಚೋರೆ' ನಿರ್ದೇಶಕ ನಿತೇಶ್ ತಿವಾರಿ ಹಾಗೂ  ನಿರ್ಮಾಪಕ ಸಾಜಿದ್ ನಾಡಿಯಾಡ್ವಾಲಾ ಅವರು ಕಳೆದ ವರ್ಷ ನಿಧನರಾದ ಸುಶಾಂತ್ ಸಿಂಗ್ ರಜಪೂತ್ ಅವರಿಗೆ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಅರ್ಪಿಸಿದರು.

 67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಮಾರ್ಚ್ 2021 ರಲ್ಲಿ ಘೋಷಿಸಲಾಯಿತು. ಕೊರೋನ  ಸಾಂಕ್ರಾಮಿಕ ರೋಗದಿಂದಾಗಿ ಪ್ರಶಸ್ತಿಗಳನ್ನು ಮುಂದೂಡಲಾಯಿತು.

'ಪಿಂಗಾರ' ಅತ್ಯುತ್ತಮ ತುಳು ಚಿತ್ರ ಹಾಗೂ 'ಅಕ್ಷಿ' ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿಗೆ ಭಾಜನವಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News