ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ

Update: 2021-10-25 12:27 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಅ.25: ರಾಜ್ಯದಲ್ಲಿ ದಕ್ಷಿಣ ಒಳನಾಡಿನ ಭಾಗ ಸೇರಿ ಇತರೆ ಭಾಗಗಳಲ್ಲಿ ಅ.26 ಮತ್ತು 27ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಮಂಡ್ಯ, ತುಮಕೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅ.26ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. 

ಉತ್ತರ ಒಳನಾಡಿನ ಧಾರವಾಡ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳ ಕೆಲವು ಕಡೆ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಅ.27ರಂದು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News