×
Ad

ಉಡುಪಿ: 'ಮಾತಾಡ್ ಮಾತಾಡ್ ಕನ್ನಡ' ಕಾರ್ಯಕ್ರಮಕ್ಕೆ ಚಾಲನೆ

Update: 2021-10-25 18:41 IST

ಉಡುಪಿ, ಅ.25: ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ’ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಮ್ಮಿಕೊಂಡಿದ್ದ ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮ ರವಿವಾರ ಉಡುಪಿಯ ಇಂದ್ರಾಳಿಯಲ್ಲಿರುವ ಯಕ್ಷಗಾನ ಕೇಂದ್ರದಲ್ಲಿ ಉದ್ಘಾಟನೆಗೊಂಡಿತು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಕ್ಷಗಾನ ಕೇಂದ್ರ ಉಡುಪಿ ಜಂಟಿಯಾಗಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಜನಪದ ಪರಿಷತ್ತು ಉಡುಪಿ ಜಿಲ್ಲಾ ಅಧ್ಯಕ್ಷ ಡಾ. ತಲ್ಲೂರು ಶಿವರಾಂ ಶೆಟ್ಟಿ ಉದ್ಘಾಟಿಸಿ ಚಾಲನೆ ನೀಡಿದರು.

ಸಮಾರಂಭದಲ್ಲಿ ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಜಗದೀಶ್ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಯಕ್ಷಗಾನ ಗುರು ಸಂಜೀವ ಸುವರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಉಪಸ್ಥಿತರಿದ್ದರು. ರವಿರಾಜ್ ಎಚ್.ಪಿ. ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ನಂತರ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಕಲಾವಿದರಿಂದ ಕನ್ನಡ ಗೀತ ಗಾಯನ, ಆಶ್ಲೇಷ ಭಟ್‌ ರಿಂದ ಎಚ್ಚಮ್ಮ ನಾಯಕ ಹಾಗೂ ಶಿಲ್ಪ ಜೋಶಿ ಅವರಿಂದ ಏಕವ್ಯಕ್ತಿ ರಂಗಪ್ರಯೋಗ ನನ್ನೊಳಗಿನ ಅವಳು ಕಾರ್ಯಕ್ರಮ ನಡೆದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News