ಸಾಲ ಮಾಡಿ, ಕಳ್ಳತನ ಮಾಡಿಯಾದರೂ ರಸ್ತೆಗಳಿಗೆ ಮೂಲಸೌಕರ್ಯ ಕಲ್ಪಿಸಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ತರಾಟೆ

Update: 2021-10-25 15:17 GMT

ಬೆಂಗಳೂರು, ಅ.25: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹದಗೆಟ್ಟು ಹೋಗಿರುವ ರಸ್ತೆಗಳ ದುರಸ್ತಿ ಕೈಗೊಳ್ಳಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ನೀವು ಸಾಲ ಮಾಡಿ ಇಲ್ಲವೇ ಕಳ್ಳತನ ಮಾಡಿಯಾದರೂ ರಸ್ತೆಗಳಿಗೆ ಮೂಲಸೌಕರ್ಯ ಕಲ್ಪಿಸಬೇಕೆಂದು ರಾಜ್ಯ ಸರಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ವಕೀಲ ಅಶ್ವತ್ಥನಾರಾಯಣ ಚೌಧರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ. 

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆಗಳಿಗೆ ಏಕೆ ಮೂಲಸೌಕರ್ಯ ಕಲ್ಪಿಸಿಲ್ಲ ಎಂದು ಪ್ರಶ್ನಿಸಿದ ನ್ಯಾಯಪೀಠ, ಶೀಘ್ರದಲ್ಲಿಯೇ ರಸ್ತೆಗಳ ದುರಸ್ತಿಗೆ ಮುಂದಾಗಿ ಎಂದು ಬಿಬಿಎಂಪಿಗೆ ಸೂಚನೆ ನೀಡಿತು. 

ಇದಕ್ಕೆ ಪ್ರತಿಕ್ರಿಯಿಸಿದ ಬಿಬಿಎಂಪಿ ಪರ ವಕೀಲರು, ಮಳೆ ಮುಗಿದ ಬಳಿಕ ರಸ್ತೆ ಕಾಮಗಾರಿ ನಡೆಸಲಾಗುವುದು. ಅನುದಾನ ಲಭ್ಯವಾದರೆ ಶೀಘ್ರ ಕಾಮಗಾರಿ ನಡೆಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. ಈ ಸಂಬಂಧ ಜನವರಿ ತಿಂಗಳೊಳಗೆ ಕಾಮಗಾರಿ ಪ್ರಗತಿಯ ವರದಿ ನೀಡಿ ಎಂದು ಬಿಬಿಎಂಪಿಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News