ದ.ಕ. ಜಿಲ್ಲೆ : 30 ಮಂದಿಗೆ ಕೊರೋನ ಸೋಂಕು

Update: 2021-10-25 15:27 GMT

ಮಂಗಳೂರು, ಅ.25: ದ.ಕ. ಜಿಲ್ಲೆಯಲ್ಲಿ ಹೊಸದಾಗಿ 30 ಮಂದಿಗೆ ಕೊರೋನ ಸೋಂಕು ತಗುಲಿದ್ದು, ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ 33 ಮಂದಿ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ.0.49 ದಾಖಲಾಗಿದೆ. 1,15,316 ಸೋಂಕಿತರ ಪೈಕಿ 1,13,355 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದಾಗಿ 1678 ಮಂದಿ ಮೃತಪಟ್ಟಿದ್ದಾರೆ. 283 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ 88,387 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 1,07,31,670 ರೂ. ದಂಡ ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News