ಬಿಜೆಪಿ ಸರಕಾರವನ್ನು ಕಟುಕರ ಸರಕಾರ ಎನ್ನದೆ ಬೇರೆ ಹೇಗೆ ಕರೆಯೋಣ?: ಸಿದ್ದರಾಮಯ್ಯ

Update: 2021-10-25 15:54 GMT
ಸಿದ್ದರಾಮಯ್ಯ (File Photo)

ಬೆಂಗಳೂರು, ಅ.25: ಶಿವಮೊಗ್ಗದಲ್ಲಿ ಚಿಕ್ಕೋಡಿ ತಾಲೂಕಿನ ಕುರಿಗಾಯಿ ನಾಯಿಂಗ್ಲಾಜ್ ವಾಸಪ್ಪ ಮಾನಿಯವರಿಗೆ ಸೇರಿದ ಸುಮಾರು 40 ಕುರಿಗಳು ಸಾವನ್ನಪ್ಪಿವೆ. ಇಂತಹವರಿಗೆ ನೆರವಾಗಲೆಂದೇ ನಾನು ಜಾರಿಗೆ ತಂದಿದ್ದ ‘ಅನುಗ್ರಹ' ಯೋಜನೆಯನ್ನು ಸ್ಥಗಿತಗೊಳಿಸಿದ್ದ ಬಿಜೆಪಿ ಸರಕಾರವನ್ನು ಕಟುಕರ ಸರಕಾರ ಎನ್ನದೆ ಬೇರೆ ಹೇಗೆ ಕರೆಯೋಣ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕುರಿಗಾಯಿಗಳ ಓಟಿನ ಬೇಟೆಗಾಗಿ ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ನಾಟಕ ನಿಲ್ಲಿಸಿ. ನಿಮಗೆ ಕುರಿಗಾಯಿಗಳ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್ ಸರಕಾರ ಜಾರಿಗೆ ತಂದಿದ್ದ ‘ಅನುಗ್ರಹ' ಯೋಜನೆಗೆ ಹಣ ಒದಗಿಸಿ ಪಶುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡಿ ಎಂದು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News