ಉಡುಪಿ: 4 ಮಂದಿ ಕೋವಿಡ್‌ಗೆ ಪಾಸಿಟಿವ್

Update: 2021-10-25 15:58 GMT

ಉಡುಪಿ, ಅ.25: ಜಿಲ್ಲೆಯಲ್ಲಿ ಇಂದು 4 ಮಂದಿ ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಒಂಭತ್ತು ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 56ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಸೋಂಕು ದೃಢಪಟ್ಟ ನಾಲ್ವರಲ್ಲಿ ಮೂವರು ಪುರುಷರು ಹಾಗೂ ಓರ್ವ ಮಹಿಳೆಯಿದ್ದಾರೆ. ಇವರಲ್ಲಿ ಮೂವರು ಉಡುಪಿ ತಾಲೂಕು ಹಾಗೂ ಒಬ್ಬರು ಕುಂದಾಪುರ ತಾಲೂಕಿಗೆ ಸೇರಿದವರು. ಪಾಸಿಟಿವ್ ಬಂದ ಎಲ್ಲಾ ನಾಲ್ವರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸೋಂಕಿ ನಿಂದ ಯಾರೂ ಮೃತಪಟ್ಟಿಲ್ಲ.

ಸೋಮವಾರ ಒಟ್ಟು 9 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,127ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 1764 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,659ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 12,04,569 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.

6233 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 6233 ಮಂದಿ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 495 ಮಂದಿ ಮೊದಲ ಡೋಸ್ ಹಾಗೂ 5738 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 373 ಮಂದಿ ಮೊದಲ ಡೋಸ್ ಹಾಗೂ 4147 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 122 ಮಂದಿ ಮೊದಲ ಡೋಸ್ ಹಾಗೂ 1569 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. 6 ಮಂದಿ ಆರೋಗ್ಯ ಕಾರ್ಯಕರ್ತರು, 16 ಮಂದಿ ಮುಂಚೂಣಿ ಕಾರ್ಯಕರ್ತರೂ ಸಹ ಇಂದು ಎರಡನೇ ಡೋಸ್ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News