ಟ್ವೆಂಟಿ-20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಅಫ್ಘಾನಿಸ್ತಾನಕ್ಕೆ ಭರ್ಜರಿ ಜಯ

Update: 2021-10-25 17:20 GMT
photo: ICC

ಶಾರ್ಜಾ, ಅ.25: ಸ್ಕಾಟ್ಲೆಂಡ್ ವಿರುದ್ಧ ಸೋಮವಾರ ನಡೆದ ಐಸಿಸಿ ಟ್ವೆಂಟಿ-20 ವಿಶ್ವಕಪ್ ನ ಗ್ರೂಪ್-2ರ 17ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ 130 ರನ್ ಗಳ ಭಾರೀ ಅಂತರದ ಗೆಲುವು ದಾಖಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನಿಸ್ತಾನ ನಿಗದಿತ 20  ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತು.

ಗೆಲ್ಲಲು ಕಠಿಣ ಗುರಿ ಪಡೆದ ಸ್ಕಾಟ್ಲೆಂಡ್ 10.2ನೇ ಓವರ್ ನಲ್ಲಿ ಕೇವಲ 60 ರನ್ ಗೆ  ಆಲೌಟಾಯಿತು. ಮುಜೀಬುರ್ರಹ್ಮಾನ್ (5-20) ಹಾಗೂ ರಶೀದ್ ಖಾನ್(4-9) 9 ವಿಕೆಟ್ ಗಳನ್ನು ಹಂಚಿಕೊಂಡರು.

ಇದಕ್ಕೂ ಮೊದಲು ಅಫ್ಘಾನಿಸ್ತಾನದ ಬ್ಯಾಟಿಂಗ್ ವಿಭಾಗದಲ್ಲಿ ನಜೀಬುಲ್ಲಾ ಝದ್ರಾನ್(59, 34 ಎಸೆತ) ಸರ್ವಾಧಿಕ ಸ್ಕೋರ್ ಗಳಿಸಿ ತಂಡವು ಬೃಹತ್ ಮೊತ್ತ ಗಳಿಸಲು ನೆರವಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News