ಪುತ್ತೂರು; ಲೈಂಗಿಕ ಕಿರುಕುಳ ಆರೋಪ: ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಬಂಧನ

Update: 2021-10-26 05:58 GMT

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕನೋರ್ವನನ್ನು ಪೋಕ್ಸೊ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ, ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಈತ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು, ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು.

ವಿದ್ಯಾರ್ಥಿನಿಯ ಪೋಷಕರು ಸಂಸ್ಥೆಗೆ ಬಂದು ವಿಚಾರಿಸಿ ಬಳಿಕ ಅ.25ರಂದು ಸಂಜೆ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಪುತ್ತೂರು ಕ್ಲಬ್ ಬಳಿ ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News