ಬೆಳ್ತಂಗಡಿ; ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಯುವಕನ ವಿರುದ್ಧ ದೂರು

Update: 2021-10-26 06:58 GMT
ಸಾಂದರ್ಭಿಕ ಚಿತ್ರ (ಫೋಟೊ : PTI)

ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಗೆ ಮೊಬೈಲ್ ಕರೆ ಮೂಲಕ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ದಿಲೀಪ್ ಮದ್ದಡ್ಕ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈತ 9ನೆ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಲಕಿಯನ್ನು ಪರಿಚಯ ಮಾಡಿಕೊಂಡು, ಆನ್ ಲೈನ್ ತರಗತಿಗೆಂದು ಬಾಲಕಿಯ ಬಳಿ ಇದ್ದ ಮೊಬೈಲ್ ನಂಬರ್ ಪಡೆದುಕೊಂಡು ಕಳೆದ ಕೆಲ ತಿಂಗಳುಗಳಿಂದ ನಿರಂತರವಾಗಿ ಆಕೆಗೆ ಕಿರುಕುಳ ನೀಡುತ್ತಿದ್ದ ಎಂದು ದೂರಲಾಗಿದೆ.

ವಾಟ್ಸ್ಆ್ಯಪ್ ಮೂಲಕ ಅಶ್ಲೀಲ ಚಿತ್ರಗಳನ್ನು ಕಳುಹಿಸುವ ಕಾರ್ಯ ಮಾಡಿದ್ದಲ್ಲದೆ, ಕೆಟ್ಟ ಮೆಸೇಜ್ ಗಳನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ವಿದ್ಯಾರ್ಥಿನಿ ನೀಡಿರುವ ದೂರಿನಂತೆ ದಿಲೀಪ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News