ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹಕ್ಕೆ ಚಾಲನೆ

Update: 2021-10-26 07:59 GMT

ಬೆಂಗಳೂರು : ಭ್ರಷ್ಟಾಚಾರದ ವಿರುದ್ಧ ಅರಿವು ಮೂಡಿಸಲು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಪ್ರತಿಜ್ಞೆಯನ್ನು ಮಾಡುವ ಮೂಲಕ ಜಾಗೃತಿ ಅರಿವು ಸಪ್ತಾಹಕ್ಕೆ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಚಾಲನೆ ನೀಡಿದರು.

ವಿಧಾನ ಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಭೋದಿಸಿದ ಅವರು ಈ ವರ್ಷದ ಜಾಗೃತಿ ಅರಿವು ಸಪ್ತಾಹದ ವಿಷಯವು "Independent India @ 75: self reliance with integrity" ಆಗಿರುತ್ತದೆ. ಈ ಜಾಗೃತಿ ಅರಿವಿನ ಸಪ್ತಾಹವನ್ನು ಪರಿಣಾಮಕಾರಿಯಾಗಿ ಆಚರಿಸಲು ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ಸಚಿವಾಲಯದ ಹಿರಿಯ ಅಧಿಕಾರಿಗಳು, ಸಿಬ್ಬಂದಿ  ಪ್ರತಿಜ್ಞಾವಿಧಿ ಸ್ವೀಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News