ಜನರ ಆರೋಗ್ಯ ರಕ್ಷಣೆಗಾಗಿ ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ : ಸಚಿವ ಕೆ.ಗೋಪಾಲಯ್ಯ

Update: 2021-10-26 08:17 GMT

ಬೆಂಗಳೂರು : ಬಿಬಿಎಂಪಿ ವತಿಯಿಂದ ಶಂಕರಮಠ ವಾರ್ಡ್ ನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆಯನ್ನು ಸ್ಥಳೀಯ ಶಾಸಕರು, ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಉದ್ಘಾಟನೆ ನೆರವೇರಿಸಿದರು.

ಸಚಿವ ಕೆ.ಗೋಪಾಲಯ್ಯ ಮಾತನಾಡಿ, ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಬಡವರು ಮತ್ತು ಮಧ್ಯಮ ವರ್ಗದ ಜನರು ಹೆಚ್ಚಿನ ಜನಸಂಖ್ಯೆಯಲ್ಲಿ ವಾಸವಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಲು ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ ಅದ್ದರಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಉತ್ತಮ ಆರೋಗ್ಯ ಸೇವೆ ಲಭಿಸುವಂತೆ ಮಾಡಲು ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗುವುದು.

ಶಂಕರಮಠ ವಾರ್ಡ್ ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕ್ಕರೆ ಖಾಯಿಲೆ, ಬಿ.ಪಿ. ಹಾಗು ಇತರ ತಪಾಸಣೆ ಮಾಡಲಾಗುವುದು ಮತ್ತು ವಿಶೇಷವಾಗಿ ಗರ್ಭಿಣಿಯರ ತಪಾಸಣೆ, ಮಗುವಿನ ಬೆಳವಣಿಗೆ ತಪಾಸಣೆ ಮಾಡಲಾಗುತ್ತದೆ ಎಂದು ವಿವರಿಸಿದರು.

ಪ್ರತಿಯೊಬ್ಬ ನಾಗರಿಕರು ಪ್ರತಿ ಆರು ತಿಂಗಳಿಗೆ ಸಂಪೂರ್ಣ ದೇಹ ತಪಾಸಣೆ ಮಾಡಿಸಿಕೊಳ್ಳಿ ಏನಾದರು ಸಮಸ್ಯೆಗಳು ಇದ್ದರೆ ವೈದ್ಯರ ಸಲಹೆ ಪಡೆಯಿರಿ ಎಂದು ಹೇಳಿದರು.

ಸ್ಥಳೀಯ ಬಿಜೆಪಿ ಮುಖಂಡರಾದ ಜಯರಾಮಣ್ಣ, ಶ್ರೀನಿವಾಸಗೌಡ, ಜಯಸಿಂಹ ನಿಸರ್ಗ ಜಗದೀಶ್ ಮತ್ತು ಆರೋಗ್ಯಧಿಕಾರಿ ಮನೋರಂಜನ್ ಹೆಗಡೆ, ನೋಡಲ್ ಅಧಿಕಾರಿ ಸುರೇಶ್ ಲಿಂಗಯ್ಯ, ಸಹಾಯಕ ಕಾರ್ಯಪಾಲಕ ಅಭಿಯಂತರಾದ ಪುಟ್ಟಸ್ವಾಮಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News