ನೂರುಲ್ ಹುದಾ ಯುಎಇ ಸಮಿತಿಯ ವಾರ್ಷಿಕೋತ್ಸವ, ಅಹ್ಲನ್ ರಬೀಹ್ ಕಾರ್ಯಕ್ರಮ

Update: 2021-10-26 08:38 GMT

ದುಬೈ: ನೂರುಲ್ ಹುದಾ ಯುಎಇ ರಾಷ್ಟ್ರೀಯ ಸಮಿತಿಯ ವತಿಯಿಂದ ಮೌಲಿದ್ ಮಜ್ಲಿಸ್ ಮತ್ತು ಐದನೇ ವಾರ್ಷಿಕ ಸಭಾ ಕಾರ್ಯಕ್ರಮ ದುಬೈ ದೇರಾ ಓರಿಯೆಂಟಲ್ ಪ್ಯಾಲೆಸ್ ಹೋಟೆಲ್ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷ ಶರೀಫ್ ಕಾವು ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ನೂರುಲ್ ಹುದಾ ದುಬೈ ಸಮಿತಿಯ ಗೌರವಾಧ್ಯಕ್ಷ ಸುಲೈಮಾನ್ ಮೌಲವಿ ಕಲ್ಲೆಗ ನೇತೃತ್ವದಲ್ಲಿ ಮೌಲಿದ್ ಮತ್ತು ದುವಾ ಮಜ್ಲಿಸ್ ನಡೆಯಿತು. ಸಮಿತಿಯ ಕಾರ್ಯದರ್ಶಿ ಅಝೀಝ್ ಸೋಂಪಾಡಿ ಸ್ವಾಗತಿಸಿದರು.

ನೂರುಲ್ ಹುದಾ ಯುಎಇ ರಾಷ್ಟ್ರೀಯ ಸಮಿತಿಯ ಗೌರವಾಧ್ಯಕ್ಷ ಸಯ್ಯದ್ ಅಸ್ಕರ್ ಅಲಿ ತಂಙಳ್  ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅನಿವಾಸಿ ಉದ್ಯಮಿ ಹಾರಿಸ್ ದರ್ಬೆ ಅವರನ್ನು ನೂರುಲ್ ಹುದಾ ಯುಎಇ ರಾಷ್ಟ್ರೀಯ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ನೂರುಲ್ ಹುದಾ ಯುಎಇ ರಾಷ್ಟ್ರೀಯ ಸಮಿತಿಯ ಕಾರ್ಯಾಧ್ಯಕ್ಷ ಅಶ್ರಫ್ ಪರ್ಲಡ್ಕ ವಾರ್ಷಿಕ ವರದಿ ವಾಚಿಸಿದರು. ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಕೌಡಿಚ್ಚಾರ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.

ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಶರೀಫ್ ಕಾವು ಅವರು ಸಮಿತಿಯಲ್ಲಿ ನಡೆದ ಕಾರ್ಯಚಟುವಟಿಕೆಗಳ ಬಗ್ಗೆ ಮಾತನಾಡಿ ಸಮಿತಿ ಯೊಂದಿಗೆ ಸಹಕರಿಸಿದ ಎಲ್ಲರಿಗೂ ವಂದಿಸಿ, ಹಾಲಿ ಸಮಿತಿ ಯನ್ನು ಬರ್ಖಾಸ್ತುಗೊಳಿಸಿದರು. ರಾಷ್ಟ್ರೀಯ ಸಮಿತಿಯ ಗೌರವ ಸಲಹೆಗಾರರಾದ ಅಶ್ರಫ್ ಶಾ ಮಾಂತೂರು ಅವರು ಚುನಾವಣಾ ಅಧಿಕಾರಿ ಯಾಗಿ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಗೆ ಚಾಲನೆ ನೀಡಿದರು 

ನೂತನ ಸಮಿತಿಯ ಪದಾಧಿಕಾರಿಗಳ ವಿವರ

ರಕ್ಷಾಧಿಕಾರಿ: ಮೊಯಿದೀನ್ ಕುಟ್ಟಿ ಹಾಜಿ ದಿಬ್ಬ, ಮುಖ್ಯ ಪೋಷಕರು: ಯೂಸುಫ್ ಈಶ್ವರಮಂಗಲ, ಗೌರವಾಧ್ಯಕ್ಷರು : ಸಯ್ಯದ್ ಅಸ್ಕರ್ ಅಲಿ ತಂಙಳ್, ಅಧ್ಯಕ್ಷರು : ಶರೀಫ್ ಕಾವು, ಕಾರ್ಯಾಧ್ಯಕ್ಷರು : ಅಶ್ರಫ್ ಪರ್ಲಡ್ಕ, ಪ್ರಧಾನ ಕಾರ್ಯದರ್ಶಿ : ಅಬ್ದುಲ್ ಲತೀಫ್ ಕೌಡಿಚ್ಚಾರ್, ಕೋಶಾಧಿಕಾರಿ : ಅಶ್ರಫ್ ಯಾಕೂತ್ ನೆಕ್ಕರೆ ಸೇರಿದಂತೆ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕರ್ನಾಟಕ ಇಸ್ಲಾಮಿಕ್ ಸೆಂಟರ್ ಕೇಂದ್ರ ಸಮಿತಿಯ ಅಧ್ಯಕ್ಷ ಮೊಯಿದೀನ್ ಕುಟ್ಟಿ ಹಾಜಿ ದಿಬ್ಬ, ದಾರುನ್ನೂರು ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಶಂಸುದ್ದೀನ್ ಸೂರಲ್ಪಾಡಿ, ಶಂಸುಲ್ ಉಲೆಮಾ ಅರೆಬಿಕ್ ಕಾಲೇಜು ತೋಡಾರು ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಅಬ್ದುಲ್ ಖಾದರ್ ಬೈತಡ್ಕ, ನೂರುಲ್ ಹುದಾ ದುಬೈ ಸಮಿತಿ ಗೌರವಾಧ್ಯಕ್ಷ ಸುಲೈಮಾನ್ ಮೌಲವಿ ಕಲ್ಲೆಗ, ಅಧ್ಯಕ್ಷ ಅನ್ವರ್ ಮಾಣಿಲ, ನೂರ್ ಮುಹಮ್ಮದ್ ನೀರ್ಕಜೆ ಮೊದಲಾದವರು ಮಾತನಾಡಿ ನೂತನ ಸಮಿತಿಯ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭ ನೂರುಲ್ ಹುದಾ ಸ್ಥಾಪನೆಯ ಉನ್ನತಿಗೆ ಸಹಾಯ ಸಹಕಾರವನ್ನು ನೀಡುತ್ತಾ ಬಂದಂತಹಾ ಹಾಜಿ ಹಾರಿಸ್ ದರ್ಬೆ ಅವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ನೂರುಲ್ ಹುದಾ ದುಬೈ ಸಮಿತಿಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ತಿಂಗಳಾಡಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News