ಬಲಿಪಾಡ್ಯಮಿ ದಿನ ದೇವಸ್ಥಾನಗಳಲ್ಲಿ ಗೋಪೂಜೆ ಕಡ್ಡಾಯ: ಮುಜರಾಯಿ ಇಲಾಖೆ ಆದೇಶ

Update: 2021-10-26 12:34 GMT
ಫೈಲ್ ಚಿತ್ರ

ಬೆಂಗಳೂರು:  ದೀಪಾವಳಿ ಹಬ್ಬದ ಬಲಿಪಾಡ್ಯಮಿ ದಿನವಾಗಿರುವ ನವೆಂಬರ್ 5ರಂದು ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಗೋಪೂಜೆ ಸಂಪ್ರದಾಯವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು  ಹೊರಡಿಸಿರುವ ಆದೇಶದಲ್ಲಿ ಸೂಚಿಸಲಾಗಿದೆ.

ಹಿಂದೂ ಧರ್ಮದಲ್ಲಿ ಗೋವುಗಳಿಗೆ ತಾಯಿಯ ಸ್ಥಾನವನ್ನು ನೀಡಿದ್ದು, ಗೋಮಾತೆ, ದೇವತೆ ಎಂದು ಭಾವಿಸಿ ಪೂಜಿಸಲಾಗುತ್ತದೆ. ಹಿಂದೂ ಧರ್ಮದ ಪುರಾಣ ಉಪನಿಷತ್ತುಗಳಲ್ಲಿ ಗೋಮಾತೆಗೆ ವಿಶೇಷ ಸ್ಥಾನಮಾನವಿದೆ. ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆಗೆ ವಾಸ್ತು ದೋಷವು ನಿವಾರಣೆಯಾಗುತ್ತದೆ ಎಂಬ ಬಲವಾದ ನಂಬಿಕೆ ನಮ್ಮ ಸಮಾಜದಲ್ಲಿದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News