ಪೊಲೀಸ್ ಠಾಣೆಯೊಳಗೆ ರಾಜಿ ಸಂಧಾನ ಮಾಡಿದರೆ ಕ್ರಮ: ಕಮಲ್ ಪಂತ್ ಎಚ್ಚರಿಕೆ
Update: 2021-10-26 18:15 IST
ಬೆಂಗಳೂರು, ಅ.26: ಪೊಲೀಸ್ ಠಾಣೆಗಳಲ್ಲಿ ರಾಜಿ, ಸಂಧಾನದ ಕೆಲಸ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಠಾಣೆಗಳಲ್ಲಿ ರಾಜಿ ಸಂಧಾನದ ಕೆಲಸ ನಡೆಯಬಾರದು. ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಹಲ್ಲೆ ಆರೋಪ ಸಂಬಂಧ ಮಹಾಲಕ್ಷ್ಮೀ ಲೇಔಟ್‍ನಲ್ಲಿರುವ ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಮನೆಯಲ್ಲಿ ಎಸಿಪಿ ವೆಂಕಟೇಶ್‍ನಾಯ್ಡು ಪರಿಶೀಲನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.