ಸ್ವಾಮಿ ಅವರಿಗೆ ಪಿಎಚ್.ಡಿ. ಪದವಿ
Update: 2021-10-26 19:03 IST
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಚ್.ಸ್ವಾಮಿ ಅವರು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.
ಸ್ವಾಮಿ ಅವರು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯ ನಿರ್ವಹಣೆ- ಒಂದು ಅಧ್ಯಯನ ಕುರಿತು ಸಂಶೋಧನೆ ನಡೆಸಿದ್ದರು. ಕುವೆಂಪು ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕ ಡಾ. ಬಿ.ಎಚ್. ಸತ್ಯನಾರಾಯಣ ಅವರು ಮಾರ್ಗದರ್ಶನ ನೀಡಿದ್ದರು. ಸ್ವಾಮಿ ಅವರು ಚನ್ನಗಿರಿ ತಾಲ್ಲೂಕಿನ ಹಟ್ಟಿ ಗ್ರಾಮದವರು.