ಫಲ್ಗುಣಿ ನದಿಗೆ ರಾಸಾಯನಿಕ ತ್ಯಾಜ್ಯ; ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲು

Update: 2021-10-26 13:36 GMT
ಸಾಂದರ್ಭಿಕ ಚಿತ್ರ

ಮಂಗಳೂರು : ನಗರದ ಕೈಗಾರಿಕಾ ಸಂಸ್ಥೆ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ನಿಂದ ಸ್ಥಳೀಯ ತೋಡು ಮತ್ತು ಫಲ್ಗುಣಿ ನದಿಗೆ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ಹರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತ, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಮಾತ್ರವಲ್ಲದೆ, ಈ ಪ್ರಕರಣದ ಕುರಿತು ನ.2ರೊಳಗೆ ಸೂಕ್ತ ಹೇಳಿಕೆ, ವಸ್ತುಸ್ಥಿತಿ ವರದಿ ಹಾಗೂ ಜಲಮೂಲ ಕಲುಷಿತವಾಗುವುದನ್ನು ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ, ಮಂಗಳೂರು ತಹಶೀಲ್ದಾರ್, ಕೆಎಸ್‌ಪಿಸಿಬಿಯ ಸೀನಿಯರ್ ಪರಿಸರ ಅಧಿಕಾರಿ, ಎಂಆರ್‌ಪಿಎಲ್ ಎಂಡಿಗೆ ನೋಟಿಸ್ ಜಾರಿಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News