ಕೋಟ್ಪಾ ದಾಳಿ; ಪ್ರಕರಣ ದಾಖಲು

Update: 2021-10-26 14:51 GMT

ಉಡುಪಿ, ಅ.26: ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಟಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಉಡುಪಿ ತಾಲೂಕಿನ ಮಣಿಪಾಲ ಮತ್ತು ಸರಳಬೆಟ್ಟು ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟ ಅಂಗಡಿಗಳು, ಹೋಟೆಲ್‌ಗಳು ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ 45 ಪ್ರಕರಣ ದಾಖಲಿಸಿದ್ದು, 8,100 ರೂ.ಗಳ ದಂಡ ವಸೂಲಿ ಮಾಡಲಾಗಿದೆ. ತಂಬಾಕಿಗೆ ಸಂಬಂಧಿಸಿದ ಜಾಹಿರಾತು ಬೋರ್ಡ್‌ಗಳನ್ನು ತೆಗೆಸಿ, ನಾಮಫಲಕ ವಿತರಿಸಲಾಗಿದೆ.

ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ್, ಹಿರಿಯ ಆಹಾರ ಸುರಕ್ಷಣಾಧಿಕಾರಿ ವೆಂಕಟೇಶ್, ಹಿರಿಯ ಆರೋಗ್ಯ ಮೇಲ್ವಿಚಾರಕ ಸತೀಶ್ ರಾವ್, ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್ ಮತ್ತು ಜಗದೀಶ್, ಕಾರ್ಮಿಕ ಇಲಾಖೆ ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ಉಡುಪಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಎನ್.ಟಿ.ಸಿ.ಪಿ ಜಿಲ್ಲಾ ಸಲಹೆಗಾರರಾದ ಮಂಜುಳಾ ಶೆಟ್ಟಿ ಮತ್ತು ಮಣಿಪಾಲ್ ಪೋಲಿಸ್ ಠಾಣೆಯ ಆರಕ್ಷಕರು ಮಂಜುನಾಥ್ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News