ಸಾಗರ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Update: 2021-10-26 16:56 GMT
ಸಾಂದರ್ಭಿಕ ಚಿತ್ರ

ಸಾಗರ : ಇಲ್ಲಿನ ಕೆಳದಿ ರಸ್ತೆಯ ಮನೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಪೂರ್ಣಿಮಾ(40),ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು,ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಮೃತ ಮಹಿಳೆಯ ಪತಿ ಪಡಿತರ ಅಂಗಡಿ ನಡೆಸುತ್ತಿದ್ದು, ಅನಾರೋಗ್ಯದ ಕಾರಣ ಶಿವಮೊಗ್ಗದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ಸಂಧರ್ಭದಲ್ಲಿ ಮನೆಯಲ್ಲಿ ವಿಕಲಾಂಗ ಮಗು ಒಬ್ಬನೆ ಇದ್ದ ಎನ್ನಲಾಗಿದೆ. ಸ್ಥಳಕ್ಕೆ ಸಾಗರ ಪೇಟೆ ಪೋಲೀಸರು ಭೆಟಿ ನೀಡಿ ಪರಿಶೀಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News