ರಸ್ತೆ ಅಪಘಾತ : ತೊಕ್ಕೊಟ್ಟು ಫ್ಲೈಓವರ್‌ನಿಂದ ಬಿದ್ದು ಬುಲೆಟ್ ಸವಾರ ಮೃತ್ಯು

Update: 2021-10-27 12:15 GMT

ತೊಕ್ಕೊಟ್ಟು : ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಫ್ಲೈಓವರ್ ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಬುಧವಾರ ಸಂಜೆಯ ವೇಳೆ ನಡೆದಿದೆ.

ಕುಂಪಲ ನಿವಾಸಿ ಸುಬ್ರಹ್ಮಣ್ಯ (50) ಮೃತರು ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬುಲೆಟ್ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭ ಅಪರಿಚಿತ ವಾಹನ ಢಿಕ್ಕಿ ಹೊಡೆದಿದ್ದು, ಪರಿಣಾಮ ಬುಲೆಟ್ ಫ್ಲೈಓವರ್‌ಗೆ ಢಿಕ್ಕಿ ಹೊಡೆದು ಸವಾರ ಸೇತುವೆಯಿಂದ ಕೆಳಗೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.

ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಬಗ್ಗೆ ಇಲ್ಲಿನ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News